ಕಾರ್ಕಳ |ಅನೈತಿಕ ಪೊಲೀಸ್ ಗಿರಿ; ಐವರು ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರ ಬಂಧನ
ಕಾರ್ಕಳ: ಅನೈತಿಕ ಪೊಲೀಸ್ ಗಿರಿ ನಡೆಸಿದ ಐವರು ಹಿಂದು ಜಾಗರಣಾ ವೇದಿಕೆಯ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಸಂತೋಷ್ ನಂದಳಿಕೆ, ಕಾರ್ತಿಕ್ ಪೂಜಾರಿ, ಸುನೀಲ್ ಮೂಲ್ಯ ಮಿಯ್ಯಾರು, ಸಂದೀಪ್ ಪೂಜಾರಿ ಮಿಯ್ಯಾರು, ಸುಜಿತ್ ತೆಳ್ಳಾರು ಎಂಬವರನು ಬಂಧಿಸಿದ್ದಾರೆ.
ಮಂಗಳೂರಿನ ಹೆಸರಾಂತ ಕಾಲೇಜು ವೊಂದರ ನಾಲ್ವರು ವೈದ್ಯರು ಹಾಗೂ ಅದೇ ಕಾಲೇಜಿನ ಇಬ್ಬರು ಮಹಿಳಾ ಪ್ರೊಫೆಸರ್ ಅವರು ರವಿವಾರದಂದು ಒಂದೇ ಕಾರಿನಲ್ಲಿ ಮಂಗಳೂರಿನಿಂದ ಶೃಂಗೇರಿಗೆ ತೆರಳಿ ಸಂಜೆ 4.30ರ ವೇಳೆಗೆ ಕಾರ್ಕಳದ ಕುಂಟಲ್ಪಾಡಿ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದರು.





