ಬಂಟ್ವಾಳ: ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ವ್ಯಕ್ತಿಯ ಬಂಧನ
ಬಂಟ್ವಾಳ: ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಕಲೆಂಜಿಬೈಲು ನಿವಾಸಿ ಅಬ್ದುಲ್ ಸಲೀಂ ( 32) ಎಂಬಾತನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಅಬ್ದುಲ್ ಸಲೀಂ ಸಜೀಪ ಮುನ್ನೂರು ಗ್ರಾಮದ ನಂದಾವರದ ತನ್ನ ಸಂಬಂಧಿಕರ ಮನೆಗೆ ಬಂದಿದ್ದು, ನಂದಾವರ ಜಂಕ್ಷನ್ ನಲ್ಲಿ ಮಾದಕ ವಸ್ತು ಸೇವಿಸಿದ ನಶೆಯಲ್ಲಿ ತೊಂದರೆ ನೀಡುತ್ತಿದ್ದ ವೇಳೆ ಅಲ್ಲಿನ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.





