ಕಡಬ: ಡೆಂಟಲ್ ಕ್ಲಿನಿಕ್ ಗೆಂದು ಹೋದ ವಿವಾಹಿತೆ ನಾಪತ್ತೆ: ದೂರು ದಾಖಲು
ಕಡಬ : ಡೆಂಟಲ್ ಕ್ಲಿನಿಕ್ ಗೆಂದು ಹೋದ ವಿವಾಹಿತೆ ನಾಪತ್ತೆಯಾಗಿರುವ ಘಟನೆ ಕಡಬದಲ್ಲಿ ನಡೆದಿದೆ.
ಬಿಳಿನೆಲೆ ಗ್ರಾಮದ ದೇವಸ್ಯ ಮನೆ ಮಾಯಿಲಪ್ಪ ಗೌಡ ಅವರ ಪುತ್ರಿ ತೀರ್ಥಲತಾ ಕಾಣೆಯಾದ ವಿವಾಹಿತೆ.
ಈ ಬಗ್ಗೆ ಅವರ ತಂದೆ ದೂರು ನೀಡಿದ್ದು, ತನ್ನ ಮಗಳನ್ನು
ಗದಗ ಮೂಲದ ಮುಂಡರಗಿಯ ಶಿವರಾಜ್ ಎಂಬವರಿಗೆ
ವಿವಾಹ ಮಾಡಿಕೊಡಲಾಗಿತ್ತು. ತಂದೆ ಮನೆಗೆ ಬಂದಿದ್ದ ಆಕೆ ಸುಬ್ರಹ್ಮಣ್ಯದಲ್ಲಿರುವ ಡೆಂಟಲ್ ಕ್ಲಿನಿಕ್ ಗೆ ಚಿಕಿತ್ಸೆಗಾಗಿ ತೆರಳಿ ಬಳಿಕ ಮನೆಗೆ ಬಂದಿಲ್ಲವೆಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸರು ದೂರು ದಾಖಲಿಸಿಕೊಂಡು ಸಾರ್ವಜನಿಕ ಪ್ರಕಟಣೆ ಹೊರಡಿಸಿ ಮಾಹಿತಿ ಸಿಕ್ಕಲ್ಲಿ ಠಾಣೆಗೆ ತಿಳಿಸುವಂತೆ ಕೋರಿದ್ದಾರೆ.





