December 18, 2025

ದ‌‌.ಕ. ಜಿಲ್ಲೆಯಲ್ಲಿ ಮತ್ತೆ ಮುಂದುವರಿದ ಅನೈತಿಕ ಪೊಲೀಸ್ ಗಿರಿ: ಧರ್ಮಸ್ಥಳದಲ್ಲಿ ಮುಸ್ಲಿಂ ಆಟೋ ಚಾಲಕನ ಮೇಲೆ ಸಂಘಪರಿವಾರದ ಕಾರ್ಯಕರ್ತರು ಹಲ್ಲೆ

0
image_editor_output_image1570884488-1691040795273.jpg

ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನೈತಿಕ ಪೊಲೀಸ್ ಗಿರಿ ಘಟನೆಗಳು ಮುಂದುವರಿದಿದ್ದು, ಆ.2ರಂದು ರಾತ್ರಿ ವೇಳೆ ಧರ್ಮಸ್ಥಳ ದ್ವಾರದ ಬಳಿಯ ಬಸ್ ನಿಲ್ದಾಣದಲ್ಲಿ ಅನೈತಿಕ ಪೊಲೀಸ್ ಗಿರಿ ಘಟನೆ ನಡೆದಿದೆ.

ರಾತ್ರಿ 9 ಗಂಟೆ ವೇಳೆಗೆ ಆಟೋದಲ್ಲಿ ಪ್ರಯಾಣಿಕರನ್ನು ಕೂರಿಸಿಕೊಂಡು ಹೋಗುತ್ತಿದ್ದಾಗ ಅಡ್ಡಗಟ್ಟಿದ ಸಂಘಪರಿವಾರದ ಕಾರ್ಯಕರ್ತರು ಆಟೋ ಚಾಲಕನ ಮೇಲೆ ಹಲ್ಲೆ ನಡೆಸಲಾಗಿದೆ. ರಿಕ್ಷಾ ಚಾಲಕ ಮುಸ್ಲಿಂ ಸಮುದಾಯಕ್ಕೆ ಸೇರಿದವರು ಎಂಬ ಹಿನ್ನೆಲೆಯಲ್ಲಿ ಈ ಹಲ್ಲೆ ನಡೆದಿದೆ.

ಹಲ್ಲೆಗೊಳಗಾದ ಆಟೋ ಚಾಲಕನನ್ನು ಉಜಿರೆ ನಿವಾಸಿ ಮೊಹಮ್ಮದ್ ಆಶಿಕ್ (22) ಎಂದು ಗುರುತಿಸಲಾಗಿದೆ.

ಈ ಕುರಿತಂತೆ ‌ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!