March 23, 2026

ಮಂಗಳೂರು: ಆ.6 ಅಂತರಾಷ್ಟ್ರೀಯ ಮಟ್ಟದ ರೈಲ್ವೆ ನಿಲ್ದಾಣದ ಶಿಲಾನ್ಯಾಸಕ್ಕೆ ಪ್ರಧಾನಿ ಮೋದಿ ಚಾಲನೆ

0
IMG-20230803-WA0037.jpg


 
ಮಂಗಳೂರು: ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣವನ್ನು ವಿಶ್ವದರ್ಜೆಗೆ ಅಭಿವೃದ್ಧಿ ಪಡೆಸಲು ಆ.6 ರಂದು ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಕೂಡ ಭಾಗಿಯಾಗಲಿದ್ದಾರೆ.

ಸುಮಾರು 19.32 ಕೋಟಿ ರೂ. ವೆಚ್ಚದಲ್ಲಿ ಸೆಂಟ್ರಲ್‌ ರೈಲು ನಿಲ್ದಾಣ ನಿರ್ಮಾಣವಾಗಲಿದೆ. 2023-24ನೇ ಸಾಲಿನ ಬಜೆಟ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣ, ಮಂಗಳೂರು ಕೇಂದ್ರ ನಿಲ್ದಾಣ, ಬಂಟ್ವಾಳ ಹಾಗೂ ಸುಬ್ರಹ್ಮಣ್ಯ ರೈಲು ನಿಲ್ದಾಣಗಳನ್ನು ಅಮೃತ್‌ ಭಾರತ್‌ ರೈಲು ನಿಲ್ದಾಣ ಅಭಿವೃದ್ಧಿ ಯೋಜನೆಯಡಿ ಅಭಿವೃದ್ಧಿ ಪಡಿಸುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್‌ ಘೋಷಿಸಲಾಗಿತ್ತು.

ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣವನ್ನು ಅಂತರರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣವನ್ನಾಗಿ ಅಭಿವೃದ್ಧಿಪಡಿಸಲು ಕ್ರಮ ವಹಿಸಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಿಗೆ ಅಭಿನಂದನೆಗಳು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್‌ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!