March 23, 2026

ಮೋದಿ ಉಪನಾಮ ಪ್ರಕರಣ: ಸುಪ್ರೀಂಕೋರ್ಟ್‌‌ನಿಂದ ರಾಹುಲ್ ಗಾಂಧಿಗೆ ಬಿಗ್ ರಿಲೀಫ್

0
IMG-20230804-WA0016.jpg

ನವದೆಹಲಿ: ಮೋದಿ ಉಪನಾಮ ಹೇಳಿಕೆ ಹಿನ್ನಲೆ ಸೂರತ್ ನ್ಯಾಯಾಲಯದಿಂದ ಎರಡು ವರ್ಷ ಜೈಲು ಶಿಕ್ಷೆಗೆ ಒಳಗಾಗಿ ಸಂಸದ ಸ್ಥಾನ ಕಳೆದುಕೊಂಡಿರುವ ರಾಹುಲ್ ಗಾಂಧಿಗೆ ಸುಪ್ರೀಂಕೋರ್ಟ್ ಶುಕ್ರವಾರ ಬಿಗ್ ರಿಲೀಫ್ ನೀಡಿದೆ.

ರಾಹುಲ್ ವಿರುದ್ಧದ ಶಿಕ್ಷೆ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ. ರಾಹುಲ್ ಗಾಂಧಿ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದಿಸಿದ್ದರು.

ತಮ್ಮ ಶಿಕ್ಷೆಯನ್ನು ತಡೆಹಿಡಿಯಲು ನಿರಾಕರಿಸಿದ ಗುಜರಾತ್ ಹೈಕೋರ್ಟ್ ಜುಲೈ 7 ರ ತೀರ್ಪನ್ನು ರಾಹುಲ್ ಗಾಂಧಿ ಪ್ರಶ್ನಿಸಿದ್ದರು.

ರಾಹುಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ, ಪಿ.ಎಸ್.ನರಸಿಂಹ ಮತ್ತು ಸಂಜಯ್ ಕುಮಾರ್ ಅವರ ತ್ರಿಸದಸ್ಯ ಪೀಠವು ನಿಸ್ಸಂದೇಹವಾಗಿ ಹೇಳಿಕೆಗಳು ಉತ್ತಮ ಅಭಿರುಚಿಯನ್ನು ಹೊಂದಿಲ್ಲ ಮತ್ತು ಸಾರ್ವಜನಿಕ ಜೀವನದಲ್ಲಿ ವ್ಯಕ್ತಿಗಳು ಸಾರ್ವಜನಿಕ ಭಾಷಣ ಮಾಡುವಾಗ ಎಚ್ಚರಿಕೆ ವಹಿಸಬೇಕು ಎಂದು ಹೇಳಿದೆ.

ನಿಂದನೆ ಅರ್ಜಿಯಲ್ಲಿ ತಮ್ಮ ಅಫಿಡವಿಟ್ ಸ್ವೀಕರಿಸುವಾಗ, ಅವರು (ರಾಹುಲ್ ಗಾಂಧಿ) ಹೆಚ್ಚು ಎಚ್ಚರಿಕೆಯಿಂದ ಇರಬೇಕಿತ್ತು ಎಂದು ಪೀಠ ಹೇಳಿದೆ.

Leave a Reply

Your email address will not be published. Required fields are marked *

error: Content is protected !!