September 20, 2024

ಶಾಲೆಯಲ್ಲೇ 2ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ: ಪ್ರಾಂಶುಪಾಲನ ಬಂಧನ

0

ಬೆಂಗಳೂರು: ಬೆಂಗಳೂರು: 10 ವರ್ಷ ವಯಸ್ಸಿನ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿರುವ ಆರೋಪದಡಿ ನಗರದ ಶಾಲೆಯೊಂದರ ಪ್ರಾಂಶುಪಾಲರನ್ನು ವರ್ತೂರು ಠಾಣೆ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಕಾಚಮಾರನಹಳ್ಳಿಯ ಖಾಸಗಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಲ್ಯಾಂಬರ್ಟ್ ಪುಷ್ಪರಾಜ್ (65) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಆಗಸ್ಟ್ 3 ರಂದು ಎಂದಿನಂತೆ ವಿದ್ಯಾರ್ಥಿನಿ ಶಾಲೆಗೆ ತೆರಳಿದ್ದಳು. ಶಾಲೆಗೆ ಬಂದ ವಿದ್ಯಾರ್ಥಿನಿಯನ್ನು ಕಂಡ ಕಾಮುಕ ಪ್ರಾಂಶುಪಾಲ ಖಾಲಿ ರೂಮಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಮನೆಗೆ ಬಂದ ಮಗಳು ನೋವು ತಾಳದೆ ಒದ್ದಾಡಿದನ್ನು ಕಂಡ ಪೋಷಕರು ಮಗಳ ಬಳಿ ವಿಚಾರಿಸಿ ತಕ್ಷಣ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಈ ವೇಳೆ ಕೃತ್ಯ ಬಯಲಾಗಿದೆ. ವರ್ತೂರು ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಅತ್ಯಾಚಾರಕ್ಕೊಳಗಾದ 10 ವರ್ಷದ ಬಾಲಕಿ ನರದೌರ್ಬಲ್ಯ ಕಾಯಿಲೆಯಿಂದ ಬಳಲುತ್ತಿದ್ದಳು. ಗುಂಜೂರು ಸಮೀಪದ ಖಾಸಗಿ ಶಾಲೆಯಲ್ಲಿ 2ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದಳು. ನಿನ್ನೆ ಬೆಳಗ್ಗೆ 8.30 ಕ್ಕೆ ಶಾಲೆಗೆ ತೆರಳಿದ್ದು ಮಧ್ಯಾಹ್ನ 3.30 ಕ್ಕೆ ಶಾಲೆಯಿಂದ ಮನೆಗೆ ವಾಪಸ್ಸಾಗಿದ್ದಾಳೆ. ಮನೆಗೆ ಬಂದ ಮೇಲೆ ತನ್ನ ತಾಯಿಗೆ ಹೊಟ್ಟೆ ನೋವು ಎಂದು ಹೇಳಿಕೊಂಡಿದ್ದಾಳೆ.

ಸ್ನಾನ ಮಾಡಿಸಿ ಕರೆತರುವಾಗ ರಕ್ತದ ಕಲೆಗಳು ಕಂಡುಬಂದಿದೆ. ಈ ವಿಚಾರವಾಗಿ ಕೇಳಿದಾಗ ಬಾಲಕಿ ಘಟನೆ ವಿವರಿಸಿದ್ದಾಳೆ. ಮೊದಲು ಪ್ರಾಂಶುಪಾಲರ ಕೊಠಡಿಗೆ ಕರೆದುಕೊಂಡು ಹೋದರು. ವಿಶ್ರಾಂತಿ ಪಡೆಯುವಂತೆ ಹೇಳಿ ಅತ್ಯಾಚಾರ ಎಸಗಿದರು. ನಂತರ ಕೇಕ್ ತಿನ್ನಿಸಿ ಕಳುಹಿಸಿದರು ಎಂದು ವಿವರಿಸಿದ್ದಾಳೆ. ಖಾಸಗಿ ಆಸ್ಪತ್ರೆಯಲ್ಲಿ ಬಾಲಕಿ ಚಿಕಿತ್ಸೆ ಪಡೆಯುತ್ತಿದ್ದಾಳೆ.ವರ್ತೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!