March 23, 2026

ವಿಟ್ಲ: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿ ನೇತೃತ್ವದಲ್ಲಿ ಅ.8ರಂದು ವಿಟ್ಲದಲ್ಲಿ ಪ್ರತಿಭಟನೆ

0
IMG-20230804-WA0026.jpg

ವಿಟ್ಲ: ಪೆರುವಾಯಿ ಗ್ರಾಮದಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿ ನೇತೃತ್ವದಲ್ಲಿ ವಿವಿಧ ರಾಜಕೀಯ ಪಕ್ಷದ ಎಸ್ ಸಿ, ಎಸ್ ಟಿ ಘಟಕ ಮತ್ತು ಕಾರ್ಮಿಕ ಸಂಘಟನೆಗಳ ಸಹಭಾಗಿತ್ವದಲ್ಲಿ ವಿಟ್ಲದಲ್ಲಿ ಅಗೋಸ್ಟ್ ೮ ರಂದು ಪ್ರತಿಭಟನೆ ನಡೆಯಲಿದೆ ಎಂದು ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿ ಸ್ಥಾಪಕಾಧ್ಯಕ್ಷ ಬಿ.ಕೆ ಸೇಸಪ್ಪ ಬೆದ್ರಕಾಡು ತಿಳಿಸಿದರು.

ಅವರು ವಿಟ್ಲದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಬೆಳಿಗ್ಗೆ ವಿಟ್ಲ ಜೈನ ಬಸದಿಯಿಂದ ಮೆರವಣಿಗೆ ಹೊರಟು ವಿಟ್ಲ ನಾಡಕಚೇರಿ ಬಳಿ ಪ್ರತಿಭಟನೆ ನಡೆಯಲಿದೆ. ಬಳಿಕ ಉಪತಹಶೀಲ್ದಾರರ ಮೂಲಕ ಮುಖ್ಯಮಂತ್ರಿ, ಗೃಹಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ದ.ಕ ದಲಿತ್ ಸೇವಾ ಸಮಿತಿ ಜಿಲ್ಲಾಧ್ಯಕ್ಷೆ ಬಿ.ಕೆ ಪ್ರೇಮ, ಕಾರ್ಯಾಧ್ಯಕ್ಷ ಚಂದ್ರಶೇಖರ ಯು, ಜಿಲ್ಲಾ ಕೋಶಾಧಿಕಾರಿ ಶಾಲಿನಿ, ತಾಲೂಕು ಮಾಜಿ ಅಧ್ಯಕ್ಷ ಗಣೇಶ್ ಸೀಗೆಬಲ್ಲೆ, ಗೀತಾ, ಸಂಜೀವ ಕುಲಾಲು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!