March 23, 2026

ಮಂಗಳೂರು: ನೆರೆಮನೆಯ ಮಹಿಳೆ ಸ್ನಾನ ಮಾಡುವಾಗ ಮೊಬೈಲ್ ನಲ್ಲಿ ವೀಡಿಯೋ ಚಿತ್ರೀಕರಣ: ಸಂಘಪರಿವಾರದ ಕಾರ್ಯಕರ್ತನ‌ ಬಂಧನ

0
image_editor_output_image-1429861949-1691213466959.jpg

ಮಂಗಳೂರು: ನೆರೆಮನೆಯ ಮಹಿಳೆಯೊಬ್ಬರು ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುವುದನ್ನು ಮೊಬೈಲ್ ನಲ್ಲಿ ಚಿತ್ರೀಕರಿಸುತ್ತಿದ್ದ ಸಂಘಪರಿವಾರದ ಕಾರ್ಯಕರ್ತನೊಬ್ಬನನ್ನು ಸ್ಥಳೀಯರು ಹಿಡಿದು ಮುಲ್ಕಿ ಪೊಲೀಸರಿಗೆ ಒಪ್ಪಿಸಿದ ಘಟನೆ ಬುಧವಾರ ವರದಿಯಾಗಿದೆ.

ಬಂಧಿತನನ್ನು ಸುಮಂತ್ ಪೂಜಾರಿ (22) ಎಂದು ಗುರುತಿಸಲಾಗಿದೆ. ಕೆಮ್ರಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಕ್ಷಿಕೆರೆ ಹೊಸಕಾಡು ಎಂಬಲ್ಲಿ ಬುಧವಾರ ರಾತ್ರಿ 11 ಗಂಟೆಗೆ ನಡೆದಿದ್ದು, ಶುಕ್ರವಾರ ಬೆಳಕಿಗೆ ಬಂದಿದೆ.

ಆರೋಪಿ ಸುಮಂತ್ ತನ್ನ ನೆರೆ ಮನೆಯ ಬಚ್ಚಲು ಕೋಣೆಯಲ್ಲಿ ಮಹಿಳೆಯೊಬ್ಬರು ಸ್ನಾನ‌ ಮಾಡುವುದನ್ನು ವೀಡಿಯೊ ಮಾಡುತ್ತಿದ್ದ ಎನ್ನಲಾಗಿದೆ.

ಈ ವೇಳೆ ಮೊಬೈಲ್ ಕ್ಯಾಮರಾ ಗಮನಿಸಿದ ಮಹಿಳೆ ಕಿರುಚಾಡಿದ್ದು, ಈ ವೇಳೆ ನೆರೆಮನೆಯವರು ಸುಮಂತ್ ನನ್ನು ಹಿಡಿದು ಥಳಿಸಿದ್ದಾರೆ ಎನ್ನಲಾಗಿದೆ.

ಬಳಿಕ ಮುಲ್ಕಿ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಮಹಿಳೆ ಸ್ನಾನ ಮಾಡುವ ವೀಡಿಯೊ ಮಾಡಿದ್ದ ಮೊಬೈಲ್‌ ಸಹಿತ ಆತನನ್ನು ವಶಕ್ಕೆ ಪಡೆದು ಠಾಣೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.

ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪ್ರಜ್ವಲ್‌ ಎಂಬವರು ನೀಡಿದ ದೂರಿನನ್ವಯ ಮೂಲ್ಕಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ನೆರೆ ಮನೆಯ ಮಹಿಳೆಯ ವೀಡಿಯೊ ಚಿತ್ರೀಕರಣ ಮಾಡಿದ್ದ ಆರೋಪಿ ಸುಮಂತ್‌ನನ್ನು ವಶಕ್ಕೆ ಪಡೆದುಕೊಳ್ಳುವ ಸಂದರ್ಭ ಆತ ವೀಡಿಯೊ ಚಿತ್ರೀಕರಿಸಿದ್ದ ಮೊಬೈಲ್ ಫೊನ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಆತನ ಮೊಬೈಲ್ ನಲ್ಲಿ ಇಂತಹ ಹಲವು ವೀಡಿಯೋಗಳಿದ್ದವು ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!