December 19, 2025

ಕಂಕನಾಡಿ- ಪಂಪ್‌ವೆಲ್ ನಲ್ಲಿ ದ್ವಿಚಕ್ರ ವಾಹನದಲ್ಲಿ ಗಾಂಜಾ ಮಾರಾಟ: ಆರೋಪಿಯ ಬಂಧನ

0
image_editor_output_image-456129449-1691214601650.jpg

ಮಂಗಳೂರು: ‘ಡ್ರಗ್ಸ್ ಫ್ರಿ ಮಂಗಳೂರು’ ಅಭಿಯಾನದ ಅಂಗವಾಗಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಚರಣೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಮಂಗಳೂರು ನಗರದ ಕೋಡಿಕಲ್ ನಿವಾಸಿ ಮೊಹಮ್ಮದ್ ಅಝೀಝ್ ಯಾನೆ ಅಜೀಜ್ (40) ಬಂಧಿತ ಆರೋಪಿ.

ಕಂಕನಾಡಿ- ಪಂಪ್‌ವೆಲ್ ಪರಿಸರದಲ್ಲಿ ದ್ವಿಚಕ್ರ ವಾಹನದಲ್ಲಿ ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದರು.

ಆತನಿಂದ 50,000 ರೂಪಾಯಿ ಮೌಲ್ಯದ 2 ಕೆ. ಜಿ. ತೂಕದ ಗಾಂಜಾ, ಸುಝುಕಿ ಆ್ಯಕ್ಸಸ್ ದ್ವಿಚಕ್ರ ವಾಹನ ಹಾಗೂ ಮೊಬೈಲ್ ಫೋನ್ ಸಹಿತ ಒಟ್ಟು ಒಂದು ಲಕ್ಷದ ಐದು ಸಾವಿರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ.

ಈ ಗಾಂಜಾ ಮಾರಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ.

ಆರೋಪಿಯ ವಿರುದ್ಧ ಈ ಹಿಂದೆ 2022 ರಲ್ಲಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿತ್ತು.

Leave a Reply

Your email address will not be published. Required fields are marked *

You may have missed

error: Content is protected !!