December 19, 2025

ಬೆಳ್ತಂಗಡಿ: ಸೌಜನ್ಯ ಕೇಸ್ ರಹಸ್ಯ ಬಿಚ್ಚಿಟ್ಟರೆ ನನ್ನನ್ನು ಕೊಲ್ಲಬಹುದು: ಸ್ಫೋಟಕ ಹೇಳಿಕೆ ನೀಡಿದ ವಸಂತ ಬಂಗೇರ

0
IMG-20230807-WA0029.jpg

ಬೆಳ್ತಂಗಡಿ: ಸೌಜನ್ಯಾ ಪ್ರಕರಣದ ರಹಸ್ಯ ಬಿಚ್ಚಿಟ್ಟರೆ ನನ್ನನ್ನು ಕೊಲ್ಲಬಹುದು. ಆದರೆ ಆ ರಹಸ್ಯವನ್ನು ನಾನು ಸಾಯೋದಕ್ಕು ಮೊದಲು ಹೇಳದೇ ಬಿಡೋದಿಲ್ಲ ಎಂದು ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಸ್ಫೋಟಕ ಹೇಳಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಸೌಜನ್ಯಾ ಪ್ರಕರಣದಲ್ಲಿ ಸೌಜನ್ಯಾ ಪ್ರಕರಣವನ್ನ ಉದ್ದೇಶಪೂರ್ವಕ ದಾರಿ ತಪ್ಪಿಸಲಾಗಿದ್ದು, ಯಾರೆಂದು ನನಗೆ ಗೊತ್ತಿದೆ ಎಂದರು.

ಇನ್ನು ನಾನು ಶಾಸಕನಾಗಿದ್ದಾಗ ಅಧಿವೇಶನದಲ್ಲಿ ಸೌಜನ್ಯಾ ಕೇಸ್ ಸಿಬಿಐಗೆ ವಹಿಸಲು ಆಗ್ರಹಿಸಿದ್ದೆ. ಸಿದ್ದರಾಮಯ್ಯನವರು ಕೆಲವರನ್ನ ತುಂಬಾ ಒಳ್ಳೆಯವರು ಎಂದು ನಂಬಿದ್ದರು. ಅಧಿವೇಶನಕ್ಕೂ ಮುನ್ನ ನನ್ನನ್ನು ಕರೆದು, ಇದನ್ನ ಪ್ರಸ್ತಾಪ ಮಾಡಬೇಡ, ಪ್ರಕರಣ ಸಿಬಿಐಗೆ ವಹಿಸಲು ಸಾಧ್ಯವಿಲ್ಲ ಎಂದಿದ್ದರು. ಆದರೆ ವಿಧಾನಸಭೆ ಕೊಠಡಿಯಲ್ಲಿ ನಾನು ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಿದ್ದೆ. ಸೌಜನ್ಯಾ ಮಾತ್ರವಲ್ಲ ಬೆಳ್ತಂಗಡಿಯಲ್ಲಿ ನಡೆದ ಅಮಾನುಷ ಹತ್ಯೆಗಳ ಬಗ್ಗೆ ಅವರಿಗೆ ಮನವರಿಕೆ ಮಾಡಿದ್ದೆ. ಕೊನೆಗೆ ಸಿದ್ದರಾಮಯ್ಯನವರು ಅಧಿವೇಶನದಲ್ಲಿ ಸೌಜನ್ಯಾ ಪ್ರಕರಣವನ್ನು ಸಿಬಿಐಗೆ ವಹಿಸ್ತೇನೆ ಎಂದಿದ್ದರು.

ಇನ್ನು ಸಿಬಿಐ ತನಿಖೆಯಲ್ಲಿ ನ್ಯಾಯ ಸಿಗುತ್ತೆ ಎಂಬ ಭಾವನೆ, ನಂಬಿಕೆ ನನಗಿತ್ತು. ಆದರೆ ಸಿಬಿಐ ತನಿಖೆ ಅರ್ಧದಲ್ಲಿರುವಾಗಲೇ ಇದರಲ್ಲಿ ಮೋಸ ಆಗಿದೆ ಎನ್ನೋದು ತಿಳಿದುಬಂತು. ಏನು ಮೊಸ, ಯಾರು ಕಾರಣ ಅಂತ ಅದನ್ನ ಸಾರ್ವಜನಿಕವಾಗಿ ಹೇಳಲು ಸಾಧ್ಯವಿಲ್ಲ. ಆದರೆ ಸಂದರ್ಭ ಬಂದಾಗ ಈ ವಿಚಾರ ಹೇಳುತ್ತೇನೆ. ಸೌಜನ್ಯಾ ಪ್ರಕರಣದ ದಿಕ್ಕು ತಪ್ಪಿಸಿದ್ದು ಯಾರು? ಅನ್ಯಾಯ, ತೊಂದರೆ ಕೊಟ್ಟಿದ್ದು ಯಾರು ಎಂದು ಹೇಳುತ್ತೇನೆ. ಅದಕ್ಕೂ ಮೊದಲು ನನ್ನನ್ನು ಸಾಯಿಸಿದ್ರೂ ಸಾಯಿಸಬಹುದು. ಸಾಯಿಸಲು ಅಷ್ಟು ಸುಲಭ ಇಲ್ಲ. ನಾನೂ ದೈವ ಭಕ್ತ. ಆದರೆ ನಾನು ಸಾಯೋದ್ರೊಳಗೆ ಸೌಜನ್ಯ ಪ್ರಕರಣಕ್ಕೆ ನ್ಯಾಯ ಕೊಡಿಸಿಯೇ ಸಿದ್ಧ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!