ಸುಳ್ಯ: ಕಾರು ಢಿಕ್ಕಿ ಹೊಡೆದು ಪಾದಚಾರಿ ಮೃತ್ಯು
ಸುಳ್ಯ: ಓಮಿನಿ ಕಾರೋಂದು ಪಾದಚಾರಿಗೆ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಸುಳ್ಯ ತಾಲೂಕಿನ ಅರಂತೋಡಿನಲ್ಲಿ ವರದಿಯಾಗಿದೆ.
ಅರಂತೋಡು ಉಳುವಾರು ತೀರ್ಥರಾಮ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಮೀನು ವ್ಯಾಪಾರಕ್ಕೆಂದು ಹೋಗುತ್ತಿದ್ದ ಓಮಿನಿ ಕಾರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಉಳುವಾರು ನಿವಾಸಿ ತೀರ್ಥರಾಮ ಎಂಬುವರಿಗೆ ಢಿಕ್ಕಿ ಹೊಡೆದಿದೆ.
ಪರಿಣಾಮ ತೀರ್ಥರಾಮ ಅವರಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಕೆವಿಜಿ ಆಸ್ಪತ್ರೆಗೆ ಸಾಗಿಸಿದರು.
ಆದರೆ ಅವರು ಚಿಕಿತ್ಸೆ ಫಲಿಸದೇ ಮೃತಪಟಿರುತ್ತಾರೆ.





