December 19, 2025

ಮಾಣಿಯಲ್ಲಿ ಬ್ರಿಡ್ಜ್ ಕೆಲಸಕ್ಕೆ ತಂದಿಟ್ಟಿದ್ದ ರಾಡ್ ಸಹಿತ ಇತರ ಸಾಮಗ್ರಿಗಳ ಕಳವು: ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

0
image_editor_output_image-567504156-1691477636945.jpg

ವಿಟ್ಲ : ಮಾಣಿಯಲ್ಲಿ ಬ್ರಿಡ್ಜ್ ಕೆಲಸಕ್ಕೆ ತಂದಿಟ್ಟಿದ್ದ ರಾಡುಗಳು, ಪ್ಲೇಟ್ಸ್ ಹಾಗೂ ಇತರ ಸಾಮಗ್ರಿಗಳು ಕಳ್ಳತನವಾಗಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ ಬಿ ಮೂಡ ಗ್ರಾಮದ ನಿವಾಸಿ, ಕೆ.ಎನ್.ಆರ್ ಕನ್ಸ್ಟ್ರಕ್ಷನ್ ಕಂಪೆನಿಯಲ್ಲಿ ಪಿ.ಆರ್.ಒ ಆಗಿ ಕೆಲಸ ನಿರ್ವಹಿಸುತ್ತಿರುವ ಆರ್. ನಂದಕುಮಾರ್ ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ ತಾಲೂಕು ಮಾಣಿ ಎಂಬಲ್ಲಿ ಬ್ರಿಡ್ಜ್ ಕೆಲಸ ಮಾಡಲು ತಂದು ಇಟ್ಟಿದ್ದ ರಾಡುಗಳು, ಪ್ಲೇಟ್ಸ್ ಹಾಗೂ ಇತರ ಸಾಮಾಗ್ರಿಗಳು ಆ.7 ರಂದು ನೋಡಿದಾಗ ಕಳ್ಳತನವಾಗಿದ್ದು, ಸಾಮಾಗ್ರಿಗಳನ್ನು ಹುಡುಕಾಡಿದಾಗ ಮಾಣಿ ಗ್ರಾಮದ ಪಟ್ಲಕೋಡಿ ಎಂಬಲ್ಲಿ ಈಚರ್ ವಾಹನದಲ್ಲಿ ವ್ಯಕ್ತಿಯೋರ್ವ ತುಂಬಿಸಿಕೊಂಡಿರುವುದು ಕಂಡು ಬಂದಿದ್ದು, ನಂದಕುಮಾರ್ ಕಂಡ ಆರೋಪಿ ವಾಹನವನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿರುತ್ತಾನೆ.

ಕಳ್ಳತನವಾದ ಸಾಮಾಗ್ರಿಗಳು 5 ಟನ್ ಗಳಾಗಿದ್ದು ಅಂದಾಜು ಮೌಲ್ಯ 3,50,000/- ರೂ ಆಗಿರಬಹುದು ಎಂಬುದಾಗಿದೆ.

ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 138/2023 ಕಲಂ: 379 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Leave a Reply

Your email address will not be published. Required fields are marked *

You may have missed

error: Content is protected !!