ಮಂಗಳೂರು: ವಾಹನಗಳ ಬ್ಯಾಟರಿಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
ಮಂಗಳೂರು: ಮಂಗಳೂರು ಹೊರವಲಯದ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ವೇಳೆ ನಿಲ್ಲಿಸಲಾಗುತ್ತಿದ್ದ ವಾಹನಗಳ ಬ್ಯಾಟರಿಗಳನ್ನು ಕಳವು ಗೈಯುತ್ತಿದ್ದ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು , ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಮೂಡುಪೆರಾರ ಈಶ್ವರ ಕಟ್ಟೆ ಮಿತ್ತ ಕೊಳಪಿಲದ ನಿವಾಸಿಯಾಗಿರುವ ಪ್ರತಾಪ್ (20)ಮತ್ತು ಕಂದಾವರ ಚರ್ಚ್ ರಸ್ತೆಯ ನಿವಾಸಿ ಅನಿಲ್ ಯಾನೆ ಅನೀ (23) ಎಂಬವರು ಬಂಧಿತ ಆರೋಪಿಗಳಾಗಿದ್ದಾರೆ.
ಬಜಪೆ ಠಾಣೆ ವ್ಯಾಪ್ತಿಯ ಅಡ್ಡೂರು, ಕೈಕಂಬ ಮತ್ತು ಗುರುಪುರ ಪರಿಸರಗಳಲ್ಲಿ ನಿಲ್ಲಿಸಿದ್ದ ಟಿಪ್ಪರ್ ಲಾರಿ, ಜೆಸಿಬಿ ಮತ್ತು ಇತರ ವಾಹನಗಳಿಂದ ಬ್ಯಾಟರಿಗಳು ಕಳವಾಗಿರುವ ಬಗ್ಗೆ ಬಜಪೆ ಠಾಣೆಯಲ್ಲಿ 2 ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು.





