ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಮಂಗಳೂರು: ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತನನ್ನು ಮಂಗಳೂರು ಮೆನ್ನಬೆಟ್ಟು ಗ್ರಾಮದ ಮೊಹಮ್ಮದ್ ನೌಷದ್ ಯಾನೆ ಉಲ್ಲಂಜೆ ನೌಷದ್(28) ಎಂದು ಗುರುತಿಸಲಾಗಿದೆ.
ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದೀಪಕ್ ರಾವ್ ಕೊಲೆ ಪ್ರಕರಣ ಸೇರಿದಂತೆ 4 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡು ವಿಚಾರಣೆ ಸಮಯ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಈತನನ್ನು ಕೇರಳದ ಕಾಸರಗೋಡಿನ ಮೀಯಾಪದವು ಬಳಿಯಿಂದ ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಸುರತ್ಕಲ್ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.





