ಶಾಲೆಯಲ್ಲಿ ರಾಷ್ಟ್ರಗೀತೆ ಹಾಡುವಾಗ ಹೃದಯಾಘಾತ: SSLC ವಿದ್ಯಾರ್ಥಿನಿ ಮೃತ್ಯು
ಚಾಮರಾಜನಗರ: ಇತ್ತೀಚೆಗೆ ಚಿಕ್ಕ ಮಕ್ಕಳು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಕರ್ನಾಟಕದಲ್ಲಿ ಚಿಕ್ಕ ಚಿಕ್ಕ ವಯಸ್ಸಿನ್ಲಲೇ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ.
ಇದರ ಮಧ್ಯೆ ಶಾಲೆಯಲ್ಲಿ ಬೆಳಗ್ಗೆ ರಾಷ್ಟ್ರಗೀತೆ ಹಾಡುವಾಗ ಹೃದಯಾಘಾತದಿಂದ ಎಸ್ಎಸ್ಎಸ್ ಸಿ ವಿದ್ಯಾರ್ಥಿನಿ ಪೆಲಿಸಾ ಮೃತಪಟ್ಟಿದ್ದಾಳೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನಲ್ಲಿ ಈ ಘಟನೆ ನಡೆದಿದೆ.
ಇಂದು (ಆಗಸ್ಟ್ 09) ಗುಂಡ್ಲುಪೇಟೆಯ ನಿರ್ಮಲ ಶಾಲೆಯಲ್ಲಿ ರಾಷ್ಟ್ರಗೀತೆ ಹಾಡುವಾಗ ಪೆಲಿಸಾ ಹಠಾತ್ ಕುಸಿದುಬಿದ್ದು ಸಾವನ್ನಪ್ಪಿದ್ದಾಳೆ.





