November 22, 2024

ಕೇರಳದ ಮೂಲದ ವಿದ್ಯಾರ್ಥಿಗಳನ್ನು ಅಕ್ರಮ ಬಂಧನದಲ್ಲಿಟ್ಟು ಗಡ್ಡ ಬೋಳಿಸಿ, ಹಣಕ್ಕೆ ಬೇಡಿಕೆ:
ಒಂಬತ್ತು ವಿದ್ಯಾರ್ಥಿಗಳನ್ನು ಬಂಧಿಸಿದ ಮಂಗಳೂರು ಪೊಲೀಸರು

0

ಮಂಗಳೂರು: ಮಂಗಳೂರಿನ ಫಳ್ನೀರ್‌ನ ನರ್ಸಿಂಗ್ ಕಾಲೇಜೊಂದರ ಕೇರಳ ಮೂಲದ ವಿದ್ಯಾರ್ಥಿಗಳನ್ನು ತಮ್ಮ ಕೊಠಡಿಗೆ ಕರೆದೊಯ್ದು ಅಕ್ರಮ ಬಂಧನದಲ್ಲಿಟ್ಟು ಗಡ್ಡ ಬೋಳಿಸಿ, ಹಣ ನೀಡುವಂತೆ ಒತ್ತಾಯಿಸಿ, ಹಲ್ಲೆ ನಡೆಸಿ, ಕೊಲೆ ಬೆದರಿಕೆಯೊಡ್ಡಿದ ಆರೋಪದಲ್ಲಿ ಒಂಬತ್ತು ಮಂದಿಯನ್ನು ಮಂಗಳೂರಿನ ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ.

ಕೇರಳ ಮೂಲದ ಅಭಿ, ಅಲೆಕ್ಸ್, ನಂದು, ಶ್ರೀಕುಮಾರ್, ಶಿಹಾಸ್, ಪ್ರವೀಶ್, ಗೋಪಿಕೃಷ್ಣ, ಹಸನ್, ವಿಷ್ಣು, ಜಾಸಿಲ್, ಅಲೆನ್ ಬಂಧಿತರು. ಇವರನ್ನು ಮಂಗಳೂರು ರೈಲ್ವೇ ನಿಲ್ದಾಣ ಬಳಿಯಿಂದ ಪೊಲೀಸರು ಬಂಧಿಸಿದ್ದಾರೆ.

ಬಂಧಿತ 9 ಮಂದಿಯಲ್ಲಿ 7 ಮಂದಿ ಗಾಂಜಾ ಸೇವನೆ ಮಾಡಿರುವುದು ವೈದ್ಯಕೀಯ ಪರೀಕ್ಷೆಯಿಂದ ದೃಢಪಟ್ಟಿದೆ. ಬಂಧಿತರಲ್ಲಿ ಓರ್ವ ರ‌್ಯಾಗಿಂಗ್ ಗೆ ಒಳಪಟ್ಟ
ಸಂತ್ರಸ್ತ ವಿದ್ಯಾರ್ಥಿಗಳ ಸೀನಿಯರ್ ಆಗಿದ್ದು, ಏಳು ಮಂದಿ ಬಲ್ಮಠದ ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳಾಗಿದ್ದಾರೆ.

ನಗರದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಗಳಿಬ್ಬರು ಅತ್ತಾವರದ ಡಿ ಮಾರ್ಟ್‌ನಿಂದ ಫಳ್ನೀರ್‌ನಲ್ಲಿರುವ ಅಪಾರ್ಟ್‌ಮೆಂಟ್‌ಗೆ ಶುಕ್ರವಾರ ರಾತ್ರಿ 7.30ರ ವೇಳೆಗೆ ಹೋಗುತ್ತಿದ್ದಾಗ ಈ ಆರೋಪಿಗಳು ಎದುರು ಸಿಕ್ಕಿದ್ದರು. ಅವರಿಗೆ ಹಾಯ್ ಎಂದು ಹೇಳಿದಾಗ ಎಲ್ಲರೂ ಕಿರುಚಾಡಿಕೊಂಡು ಇಬ್ಬರು ವಿದ್ಯಾರ್ಥಿಗಳನ್ನು ಅವರ ರೂಮಿಗೆ ಕರೆದುಕೊಂಡು ಹೋಗಿ ಬಲವಂತವಾಗಿ ಹಾಡಿಸಿದ್ದಾರೆ. ಗಡ್ಡವನ್ನು ಬೋಳಿಸಿದ್ದಾರೆ. ಹಣ ನೀಡುವಂತೆ ಒತ್ತಾಯಿಸಿದ್ದು, ಹಣ ನೀಡದಿದ್ದರೆ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಮತ್ತು ಅವರಿಂದ ರೂ 270 ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಹೆಲ್ಮೆಟ್ ಮತ್ತು ಕೈಯಿಂದ ಹಲ್ಲೆ ನಡೆಸಿದ್ದಾರೆ ಎಂದು ವಿದ್ಯಾರ್ಥಿಗಳು ದೂರು ನೀಡಿದ್ದರು.

Leave a Reply

Your email address will not be published. Required fields are marked *

error: Content is protected !!