ಮಂಗಳೂರು: ಕಿನ್ನಿಗೋಳಿ ಸಮೀಪದ ರಸ್ತೆ ಅಪಘಾತ, ಐವರು ಗಂಭೀರ
ಮಂಗಳೂರು : ಮಂಗಳೂರು ಹೊರವಲಯದ ಕಿನ್ನಿಗೋಳಿ ಸಮೀಪದ ಮೂರು ಕಾವೇರಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಐವರು ಗಂಭೀರ ಗಾಯಗೊಂಡಿದ್ದಾರೆ.
ಕಿನ್ನಿಗೋಳಿ ಸಮೀಪದ ಮೂರು ಕಾವೇರಿ ಬಳಿ ರಾಜ್ಯ ಹೆದ್ದಾರಿಯಲ್ಲಿ ಕಾರಿಗೆ ಟಿಪ್ಪರ್ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಪ್ರಯಾಣಿಕರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೂಡಬಿದ್ರೆ ಕಡೆಯಿಂದ ಕಿನ್ನಿಗೋಳಿ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಮೂರುಕಾವೇರಿ ಸಮೀಪದ ಮಹಮ್ಮಾಯಿ ದೇವಸ್ಥಾನದ ಬಳಿ ಕಾರ್ ಗೆ ಡಿಕ್ಕಿ ಹೊಡೆದಿದೆ.
ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು ಕಾರಿನಲ್ಲಿದ್ದ ಐವರು ಪ್ರಯಾಣಿಕರ ಪೈಕಿ ಮೂವರ ಸ್ಥಿತಿ ಗಂಭೀರ ಎನ್ನಲಾಗಿದೆ.
ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.





