March 23, 2026

ಎಚ್.ಡಿ. ರೇವಣ್ಣ ಆಪ್ತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ

0
image_editor_output_image-1992428715-1691632597491.jpg

ಹಾಸನ: ಹಾಡುಹಗಲೇ ಉದ್ಯಮಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ಹೊರವಲಯದ ನಾಗತವಳ್ಳಿ ಬಳಿ ಬುಧವಾರ ಮಧ್ಯಾಹ್ನ ನಡೆದಿದೆ.

ಕೃಷ್ಣೇಗೌಡ (55) ಕೊಲೆಯಾದ ಉದ್ಯಮಿ. ಹಣಕಾಸಿನ ವ್ಯವಹಾರ ಹಾಗೂ ವೈಯುಕ್ತಿಕ ದ್ವೇಷದ ಹಿನ್ನಲೆಯಲ್ಲಿ ಕೃಷ್ಣೇಗೌಡರನ್ನು ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.

ಸ್ಥಳಕ್ಕೆ ಮೈಸೂರು ವಲಯ ಐಜಿ ಬೋರಲಿಂಗಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಾಜಿ ಸಚಿವ ಹೆಚ್.ಡಿ. ರೇವಣ್ಣ ಆಪ್ತರಾಗಿದ್ದ ಕೃಷ್ಣೇಗೌಡ ಹತ್ಯೆಯಿಂದ ಜಿಲ್ಲೆಯ ಜನತೆ ಬೆಚ್ಚಿ ಬಿದ್ದಿದ್ದಾರೆ‌.

ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!