ಗೂಡ್ಸ್ ವ್ಯಾನ್ ವಾಹನ ಹರಿದು ಇಬ್ಬರು ಮಕ್ಕಳು ಸಾವು, ಏಳು ಮಕ್ಕಳು ಗಂಭೀರ
ರಾಮನಗರ: ತಾಲೂಕಿನ ಲಕ್ಷ್ಮಿಪುರ ಗ್ರಾಮದ ಬಳಿ ಬುಧವಾರ ರಾತ್ರಿ ಟ್ಯೂಷನ್ ಮುಗಿಸಿ ಮನೆಗೆ ತೆರಳುತ್ತಿದ್ದ ಮಕ್ಕಳ ಮೇಲೆ ಗೂಡ್ಸ್ ವ್ಯಾನ್ ವಾಹನ ಹರಿದ ಪರಿಣಾಮ ಇಬ್ಬರು ದಾರುಣವಾಗಿ ಸಾವನ್ನಪ್ಪಿದ್ದು, ಏಳು ಮಂದಿ ಗಂಭೀರವಾಗಿ ಗಾಯಗೊಂಡ ಭೀಕರ ಅವಘಡ ಸಂಭವಿಸಿದೆ.
ಗೂಡ್ಸ್ ವ್ಯಾನ್ ಒಟ್ಟು 9 ಮಕ್ಕಳ ಮೇಲೆ ಹರಿದಿದೆ, ಮಕ್ಕಳೆಲ್ಲರೂ 12 ವರ್ಷದವರು ಎಂದು ತಿಳಿದು ಬಂದಿದೆ. ರಾಮನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ನಿಮಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಸ್ಥಳಕ್ಕೆ ರಾಮನಗರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




