March 22, 2026

ವಿಟ್ಲ: ಪರವಾನಿಗೆ ಇಲ್ಲದೆ ಅಕ್ರಮ ಮದ್ಯ ಮಾರಾಟ: ಆರೋಪಿಯ ಬಂಧನ
 

0
IMG-20230504-WA0062.jpg


ವಿಟ್ಲ: ಪರವಾನಿಗೆ ಇಲ್ಲದೇ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಆರೋಪಿಯನ್ನು ಬಂಟ್ವಾಳ ನೆಟ್ಲಮುಡ್ನೂರು ಗ್ರಾಮದ ಶಶಿಧರ ಶೆಟ್ಟಿ ಎಂದು ಗುರುತಿಸಲಾಗಿದೆ.

ಆರೋಪಿಯ ವಶದಲ್ಲಿದ್ದ ಅಂದಾಜು ರೂ 1,516.21 ಮೌಲ್ಯದ ವಿವಿಧ ಕಂಪೆನಿಯ ಒಟ್ಟು ಪ್ರಮಾಣ 2.880 ಲೀಟರ್ ಅಕ್ರಮ ಮದ್ಯದ ಸ್ಯಾಚೆಟ್ ಗಳು ಹಾಗೂ ಮದ್ಯ ಮಾರಾಟದಿಂದ ಬಂದ ರೂಪಾಯಿ 550 ಹಣವನ್ನು ವಶಪಡಿಸಿಕೊಳ್ಳಲಾಗಿದೆ.

ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!