ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಕೊಲೆಗೈದ ಪತಿ
ಮಂಡ್ಯ: ಪರಪುರುಷರೊಂದಿಗೆ ಅನೈತಿಕ ಸಂಬಂಧ ಹೊಂದಿರುವ ಶಂಕೆಯ ಮೇಲೆ ಪ್ರೀತಿಸಿ ಮದುವೆಯಾಗಿದ್ದ ಹೆಂಡತಿಯನ್ನೇ ಗಂಡ ಕೊಲೆ ಮಾಡಿದ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಮಂಡ್ಯಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಪೂಜಾ (26) ಪತಿಯಿಂದ ಕೊಲೆಯಾದ ಮಹಿಳೆಯಾಗಿದ್ದು, ಶ್ರೀನಾಥ್ (33) ವೇಲ್‌ನಿಂದ ತನ್ನ ಪತ್ನಿಯ ಕುತ್ತಿಗೆ ಬಿಗಿದು ಕೊಲೆಗೈದಿದ್ದಾನೆ. ಪೂಜಾ ಹಾಗೂ ಶ್ರೀನಾಥ್ 9 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು.
ಆರಂಭದಲ್ಲಿ ಅನ್ಯೋನ್ಯವಾಗಿದ್ದ ದಂಪತಿಗೆ ಒಂದು ಹೆಣ್ಣುಮಗು ಇದೆ. ಕಳೆದ ಕೆಲವು ವರ್ಷಗಳಿಂದ ಪೂಜಾ ಟಿಕ್‌ಟಾಕ್ (TikTok) ಗೀಳು ಬೆಳೆಸಿಕೊಂಡಿದ್ದಳು. ರೀಲ್ಸ್ (Reels) ಮಾಡುವ ಜೊತೆಗೆ ಸ್ನೇಹಿತರೊಂದಿಗೆ ಚಾಟಿಂಗ್ ಹುಚ್ಚನ್ನೂ ಬೆಳೆಸಿಕೊಂಡಿದ್ದಳು.
ಅತಿಯಾದ ಮೊಬೈಲ್ ಬಳಕೆಯಿಂದಾಗಿ ಗಂಡನಿಗೆ ಅನುಮಾನ ಶುರುವಾಗಿದ್ದು, ದಂಪತಿ ಮಧ್ಯೆ ಪದೇ ಪದೇ ಜಳವಾಗುತ್ತಿತ್ತು.





