ಮಡಿಕೇರಿ: ಯುವಕನ ಮರ್ಮಾಂಗಕ್ಕೆ ಹೊಡೆದು ಹತ್ಯೆ
ಮಡಿಕೇರಿ: ಹಳೇ ದ್ವೇಷದ ಹಿನ್ನೆಲೆ ಯುವಕನ ಮರ್ಮಾಂಗಕ್ಕೆ ಹೊಡೆದು ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಗ್ರಾಮದ ಪಾಲಿಬೆಟ್ಟ ರಸ್ತೆಯಲ್ಲಿ ನಡೆದಿದೆ.
ಕ್ರಿಸ್ಟಲ್ (28) ಹತ್ಯೆಯಾದ ದುರ್ದೈವಿ. ಗುರುವಾರ ರಾತ್ರಿ ಸಿದ್ದಾಪುರ ಗ್ರಾಮದ ಪಾಲಿಬೆಟ್ಟ ರಸ್ತೆಯಲ್ಲಿರುವ ಬಾರ್‌ವೊಂದರಲ್ಲಿ ಕ್ರಿಸ್ಟಲ್ ಸ್ನೇಹಿತರು ಹಾಗೂ ರಂಜಿತ್ ಸ್ನೇಹಿತರು ಇಬ್ಬರು ಒಂದೇ ಬಾರಿನಲ್ಲಿ ಮದ್ಯಪಾನ ಮಾಡುತ್ತಿದ್ದ ಸಂದರ್ಭ ರಂಜಿತ್ ಹಾಗೂ ಕ್ರಿಸ್ಟಲ್ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ





