March 20, 2026

ಬೆಳಗಾವಿ: ವಿದ್ಯುತ್ ಅವಘಡದಿಂದ ಒಂದೇ ಕುಟುಂಬದ ಮೂವರು ಸಾವು

0
image_editor_output_image1103189570-1691817426420.jpg

ಬೆಳಗಾವಿ: ‌ಆಕಸ್ಮಿಕ ವಿದ್ಯುತ್ ಅವಘಡದಿಂದ ಒಂದೇ ಕುಟುಂಬದ ಮೂವರು ಸದಸ್ಯರು ಮೃತಪಟ್ಟ ದಾರುಣ ಘಟನೆ ಬೆಳಗಾವಿ ನಗರದಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.

ಮೃತ ದುದೈವಿಗಳನ್ನು ಈರಪ್ಪ ರಾಠೋಡ (53) ಪತ್ನಿ ಶಾಂತವ್ವ (45) ಹಾಗೂ ಮೊಮ್ಮಗಳು ಅನ್ನಪೂರ್ಣ (13) ಎಂದು ಗುರುತಿಸಲಾಗಿದೆ‌‌.

ಮೃತರು ರಾಮದುರ್ಗ ತಾಲೂಕಿನ ಅರಬೆಂಚಿ ತಾಂಡಾದವರು ಎಂದು ಪೊಲೀಸರು ತಿಳಿಸಿದ್ದಾರೆ. ಈರಪ್ಪ ಅವರು ನಿರ್ಮಾಣ ಹಂತದ ಮನೆಗೆ ವಾಚ್ ಮನ್ ಆಗಿ ಕೆಲಸ ಮಾಡುತ್ತಿದ್ದರು.

ಬೆಳಿಗ್ಗೆ ಕಟ್ಟಡಕ್ಕೆ ನೀರು ಹೊಡೆಯಲು ಹೋದಾಗ ಆಕಸ್ಮಿಕ ವಿದ್ಯುತ್ ತಗುಲಿ ಈ ದುರಂತ ಸಂಭವಿಸಿದೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು. ದುರಂತ ನಡೆದ ಸ್ಥಳದಲ್ಲಿ ಕುಟುಂಬದ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿತ್ತು.

Leave a Reply

Your email address will not be published. Required fields are marked *

error: Content is protected !!