ಹೃದಯಾಘಾತದಿಂದ ಪೊಲೀಸ್ ಕಾನ್ ಸ್ಟೇಬಲ್ ಮೃತ್ಯು
ರಾಯಚೂರು: ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ರಾಯಚೂರಿನಲ್ಲಿ ನಡೆದಿದೆ.
ಬಸನಗೌಡ (34) ಹೃದಯಾಘಾತದಿಂದ ಮೃತಪಟ್ಟ ಪೊಲೀಸ್ ಸಿಬ್ಬಂದಿ. ಇವರು ಜಿಲ್ಲೆಯ ಮಸ್ಕಿ ಪೊಲೀಸ್ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದರು.
ಮಸ್ಕಿ ಠಾಣೆಯಲ್ಲಿ ರೈಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಬಸನಗೌಡ ಕೆಲಸ ಮುಗಿಸಿಕೊಂಡು ಮನೆಗೆ ಬಂದಾಗ ರಾತ್ರಿ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದ್ದು, ಮಲಗಿದಲ್ಲಿಯೇ ಸಾವನ್ನಪ್ಪಿದ್ದಾರೆ.
ಕೋವಿಡ್ ದಾಳಿ 2020ರಲ್ಲಿ ಆರಂಭವಾಗಿ ಎರಡು ವರ್ಷ ಜನರನ್ನು ಬಿಟ್ಟೂ ಬಿಡದಂತೆ ಕಾಡಿತ್ತು. ಆದರೆ ಈಗಷ್ಟೇ ಜನ ಕೋವಿಡ್‌ನಿಂದ ಸ್ವಲ್ಪ ಮುಕ್ತಿ ಪಡೆದು ಉಸಿರಾಡಲು ಆರಂಭಿಸಿದ್ದಾರೆ. ಆದರೆ ದಿನೇ ಹೆಚ್ಚುತ್ತಿರುವ ಹೃದಯಾಘಾತದ ಪ್ರಕರಣಗಳು ಜನರಲ್ಲಿ ಈಗ ಮತ್ತೊಂದು ಹೊಸ ಭೀತಿ ಸೃಷ್ಟಿಸಿದೆ.





