March 20, 2026

ಮಂಗಳೂರು: ಸೌಜನ್ಯ ಹತ್ಯೆ ಪ್ರಕರಣ: ಮರು ತನಿಖೆಗೆ ಆಗ್ರಹಿಸಿ ಆ.27ರಂದು ಕರಾವಳಿಯ ಬಿಜೆಪಿ ಶಾಸಕರಿಂದ ಪ್ರತಿಭಟನೆ

0
IMG-20230812-WA0037.jpg

ಮಂಗಳೂರು: ಸೌಜನ್ಯ ಕೇಸ್ ಮರು ತನಿಖೆಗೆ ಆಗ್ರಹಿಸಿ ಆ.27ರಂದು ಪ್ರತಿಭಟನೆ ಕರಾವಳಿಯ ಶಾಸಕರಿಂದ ಪ್ರತಿಭಟನೆ ನಡೆಯಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಆ.27 ರಂದು ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಬಿಜೆಪಿ ಶಾಸಕರಿಂದ ಪ್ರತಿಭಟನೆ ನಡೆಸಲಾಗುತ್ತದೆ ಎಂದರು.

ಇನ್ನು ಪ್ರತಿಭಟನೆ ಬಳಿಕ ಮರುದಿನ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರಿಗೆ ಮನವಿ ನೀಡಲಾಗುವುದು. ಸೌಜನ್ಯ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಲಾಗುವುದು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!