March 19, 2026

ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

0
image_editor_output_image-454594860-1691901144129.jpg

ಬಂಟ್ವಾಳ: ಹಳೆಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಎಸ್.ಐ.ಹರೀಶ್ ನೇತ್ರತ್ವದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಪುದು ಗ್ರಾಮದ ಕುಮ್ಡೆಲು ನಿವಾಸಿ ಕೃಷ್ಣ (41) ಬಂಧಿತ ಆರೋಪಿ.

ಕಳ್ಳತನ ಪ್ರಕರಣದಲ್ಲಿ ಜೈಲುವಾಸ ಅನುಭವಿಸಿ ಜಾಮೀನು ಮೇಲೆ ಬಿಡುಗಡೆಗೊಂಡಿದ್ದ ಈತ ಅ ಬಳಿಕ ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.

ಇನ್ನು ಆರೋಪಿಯನ್ನು ಪೊಲೀಸ್ ಇನ್ಸ್ ಪೆಕ್ಟರ್ ಎಚ್. ನಾಗರಾಜ್ ಅವರ ಮಾರ್ಗದರ್ಶನದಲ್ಲಿ ಗ್ರಾಮಾಂತರ ಎಸ್.ಐ.ಹರೀಶ್ ಹಾಗೂ ಸಿಬ್ಬಂದಿಗಳಾದ ಗಣೇಶ್ ಪ್ರಸಾದ್, ರಾಧಾಕೃಷ್ಣನ್, ಯೋಗೇಶ್ ಡಿ.ಎಲ್, ಹಾಗೂ ವಿಜಯ್ ರವರು ಮಾಹಿತಿ ಸಂಗ್ರಹಿಸಿ ಬಡಗಮಿಜಾರು ಎಂಬಲ್ಲಿ ಪತ್ತೆ ಹಚ್ಚಿ ವಶಕ್ಕೆ ಪಡೆದುಕೊಂಡಿದ್ದು, ಬಳಿಕ ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!