ಸುಳ್ಯ: ಹುಡುಗಿಯನ್ನು ಕರೆದುಕೊಂಡು ಹೋದ ವಿಚಾರದಲ್ಲಿ ವ್ಯಕ್ತಿ ಮೇಲೆ ಹಲ್ಲೆ ಪ್ರಕರಣ: ಐದು ಮಂದಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲು-ಒಬ್ಬ ಆರೋಪಿ ವಶಕ್ಕೆ
ಸುಳ್ಯ: ಹುಡುಗಿಯನ್ನು ಕರೆದುಕೊಂಡು ಹೋದ ವಿಚಾರದಲ್ಲಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಮಂದಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಒಬ್ಬನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕೇರಳ ಮಲಪುರಂ ನಿವಾಸಿ ಮೊಹಮ್ಮದ್ ಜಲೀಲ್(39ವರ್ಷ) ಎಂಬವರು ಪ್ರಸ್ತುತ ಸುಳ್ಯ ತಾಲೂಕು ಅರಂತೋಡಿನಲ್ಲಿ ರಬ್ಬರ್ ತೋಟವನ್ನು ಕಳೆದ 3 ತಿಂಗಳ ಹಿಂದೆ ಗುತ್ತಿಗೆ ಪಡೆದು ಅರಂತೋಡಿನಲ್ಲಿ ವಾಸವಾಗಿದ್ದು, ತನ್ನ ಪರಿಚಯದ ಯುವತಿಯೋರ್ವಳು ತಾನು ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದು ತನಗೆ ವಿಶ್ರಾಂತಿ ಪಡೆಯಲು ರೂಮ್ ಬೇಕೆಂದು ಕೇಳಿಕೊಂಡ ಮೇರೆಗೆ ಜಲೀಲ್ ಅವರು ಸುಳ್ಯದಲ್ಲಿ ರೂಂ ವ್ಯವಸ್ಥೆ ಮಾಡಿ ಬಳಿಕ ವೈಯಕ್ತಿಕ ಕೆಲಸ ನಿಮಿತ್ತ ಸುಳ್ಯ ತಾಲೂಕು ತೋಡಿಕಾನಕ್ಕೆ ತೆರಳಿದ್ದಾಗ 05 ಜನ ಆರೋಪಿಗಳು ಕಾರು ಮತ್ತು ಸ್ಕೂಟರ್ ಮೂಲಕ ಜಲೀಲ್ ಕಾರನ್ನು ಪಡೆದು ಅವ್ಯಾಚವಾಗಿ ಬೈದು ಕೈಯಿಂದ ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿ ತೆರಳಿದ್ದಾರೆ.
ಆರೋಪಿಗಳ ಪೈಕಿ ಮೂವರ ಹೆಸರು ಲತೀಶ್ ಗುಂಡ್ಯ, ವರ್ಷಿತ್ ಹಾಗೂ ಪುನೀತ್ ಎಂಬುದಾಗಿ ಜಲೀಲ್ ತಿಳಿಸಿದ್ದು, ಇನ್ನುಳಿದ 2 ಜನ ಆರೋಪಿಗಳ ಪರಿಚಯ ಜಲೀಲ್ ಅವರಿಗೆ ಇಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.
ದೂರಿನ ಮೇರೆಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ 87/2023 ಕಲಂ 143, 147, 341, 323, 504, 506, 153(A) ಜೊತೆಗೆ 149 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ ಆರೋಪಿಗಳ ಪೈಕಿ ಸುಳ್ಯ ಸೊಣಂಗೇರಿ ನಿವಾಸಿ ಪುನೀತ್ ಎಂಬಾತನನ್ನು ಬಂಧಿಸಿದ್ದು, ತನಿಖೆ ಪ್ರಗತಿಯಲ್ಲಿದೆ.





