ಮಗನ ಆತ್ಮಹತ್ಯೆಯ ಬೆನ್ನಲ್ಲೇ ತಂದೆ ಕೂಡಾ ಆತ್ಮಹತ್ಯೆ: ಕಾರಣವೇನು ಗೊತ್ತೇ?
ಚೆನ್ನೈ: ನೀಟ್ ಮೆಡಿಕಲ್ ಪ್ರವೇಶ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದಕ್ಕೆ ಮನನೊಂದು 19 ವರ್ಷದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ ತಂದೆ ಕೂಡಾ ಕೊನೆಯುಸಿರೆಳೆದಿರುವ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ.
2022ರ ಸಾಲಿನಲ್ಲಿ ದ್ವಿತೀಯ ಪಿಯುಸಿಯಲ್ಲಿ 427 ಅಂಕಗಳೊಂದಿಗೆ ಉತ್ತೀರ್ಣನಾಗಿದ್ದ ಜಗದೀಶ್ವರನ್ ಎರಡು ಬಾರಿಯೂ ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣನಾಗಲು ವಿಫಲನಾಗಿದ್ದ.
ತಂದೆ ದೂರವಾಣಿ ಕರೆ ಮಾಡಿದ್ದರೂ ಕೂಡಾ ಅದನ್ನು ಸ್ವೀಕರಿಸಿಲ್ಲವಾಗಿತ್ತು. ಈತ ಶನಿವಾರ ಮನೆಯಲ್ಲಿ ನೇಣಿಗೆ ಶರಣಾಗಿದ್ದ. ಇದರಿಂದ ಮನನೊಂದ ತಂದೆ ಸೆಲ್ವಶೇಖರ್ ಕೂಡಾ ಭಾನುವಾರ ಸಾವನ್ನಪ್ಪಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ತಂದೆ ಮತ್ತು ಮಗನ ಸಾವಿನ ಘಟನೆಗೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಸಂತಾಪ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ವಿಶ್ವಾಸ ಕಳೆದುಕೊಳ್ಳದೇ, ಇಂತಹ ದುಡುಕಿನ ನಿರ್ಧಾರ ತೆಗೆದುಕೊಳ್ಳಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.





