December 19, 2025

ನಟ ಉಪೇಂದ್ರನ ವಿರುದ್ಧ ದಾಖಲಾದ ಎಫ್‌ಐಆರ್‌ ಗೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

0
IMG-20230814-WA0039.jpg

ಬೆಂಗಳೂರು:ತಮ್ಮ ಮೇಲೆ ದಾಖಲಾಗಿರುವ ಎಫ್.ಐ.ಆರ್ ರದ್ದುಗೊಳಿಸುವಂತೆ ನಟ ಉಪೇಂದ್ರ ಹೈಕೋರ್ಟ್ ಮೆಟ್ಟಿಲು ಏರಿದ್ದರು.ಈ ಅರ್ಜಿಗೆ ಸಂಬಂಧಿಸಿದ್ದಂತೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಈಗಾಗಲೇ ತಾವು ಆಡಿದ ಮಾತಿನ ಬಗ್ಗೆ ಕ್ಷಮೆ ಕೇಳಿದ್ದೇನೆ. ಜೊತೆಗೆ ಆ ವಿಡಿಯೋವನ್ನು ಸೋಷಿಯಲ್ ಮೀಡಿಯಾದಿಂದಲೇ ಡಿಲಿಟ್ ಮಾಡಿದ್ದೇನೆ. ಯಾರ ಮನಸ್ಸಿಗೂ ನೋವು ಮಾಡುವ ಉದ್ದೇಶದಿಂದ ಆಡಿದ ಮಾತು ಅದಾಗಿರಲಿಲ್ಲವೆಂದು ಎಂದು ನಟ ಉಪೇಂದ್ರ ಮನವಿ ಮಾಡಿಕೊಂಡಿದ್ದರು. ಈಗ ಅವರ ಪರವಾಗಿ ಕೋರ್ಟ್​ ಆದೇಶ ನೀಡಿದೆ.

ಉಪೇಂದ್ರ ಸಲ್ಲಿಸಿದ್ದ ಮನವಿಯನ್ನು ಏಕಸದಸ್ಯ ಪೀಠವು ವಿಚಾರಣೆಯನ್ನು ಕೈಗೆತ್ತಿಕೊಂಡಿತ್ತು.ಉಪೇಂದ್ರ ಪರ ವಕೀಲ ಉದಯ್ ಹೊಳ್ಳ ವಾದ ಮಂಡಿಸಿ ಆ ಪದವನ್ನು ದುರುದ್ದೇಶದಿಂದ ಬಳಸಿದ್ದಲ್ಲ, ಉಪೇಂದ್ರ ಅವರು ಜನಪ್ರಿಯ ವ್ಯಕ್ತಿಯ ಜೊತೆ ಜವಾಬ್ದಾರಿಯುತ ವ್ಯಕ್ತಿಯು ಆಗಿದ್ದಾರೆ. ಅವರಿಗೆ ಎಲ್ಲರ ಬಗ್ಗೆಯೂ ಗೌರವವಿದೆ ಎಂದು ಮನವರಿಕೆ ಮಾಡಿಕೊಟ್ಟರು.

ಉಪೇಂದ್ರ ಪರ ವಕೀಲರ ವಾದ ಆಲಿಸಿದ ನ್ಯಾಯಮೂರ್ತಿಗಳು ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಗೆ ಸಂಬಂಧಿಸಿದಂತೆ ಮಾತ್ರ ಮಧ್ಯಂತರ ತಡೆಯಾಜ್ಞೆನೀಡಿದೆ.

Leave a Reply

Your email address will not be published. Required fields are marked *

You may have missed

error: Content is protected !!