March 20, 2026

ಪುತ್ತೂರು: ಆರ್ಯಾಪು ಗ್ರಾ.ಪಂ: ಬಿಜೆಪಿ ಬೆಂಬಲಿತ ಇಬ್ಬರು ಸದಸ್ಯರು ಕಾಂಗ್ರೆಸ್‌ಗೆ ಸೇರ್ಪಡೆ: ಶಾಸಕರಿಂದ ಸ್ವಾಗತ

0
IMG-20230814-WA0046.jpg

ಪುತ್ತೂರು: ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮ ಪಂಚಾಯತ್ ನ ಇಬ್ಬರು ಬಿಜೆಪಿ ಬೆಂಬಲಿತ ಗ್ರಾಪಂ ಸದಸ್ಯರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.

ಆರ್ಯಾಪು ಗ್ರಾಪಂನ ಮೂರನೇ ವಾರ್ಡಿನ ಬಿಜೆಪಿ ಬೆಂಬಲಿತ ಸದಸ್ಯರಾದ ಪವಿತ್ರ ರೈ ಮತ್ತು ಪೂರ್ಣಿಮಾ ರೈ ಕಾಂಗ್ರೆಸ್ ಸೇರಿದ ಗ್ರಾಪಂ ಸದಸ್ಯರು. ಶಾಸಕ ಅಶೋಕ್ ಕುಮಾರ್ ರೈ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.

ಇನ್ನು ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಬೆನ್ನಲ್ಲೇ ಬಿಜೆಪಿ ಸದಸ್ಯರಿಬ್ಬರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಎಸ್ ಟಿ ಘಟಕದ ಅಧ್ಯಕ್ಷ ಮಹಾಲಿಂಗ ನಾಯ್ಕ್, ಸಾಮಾಜಿಕ ಜಾಲ ತಾಣದ ಬ್ಲಾಕ್ ಘಟಕದ ಅಧ್ಯಕ್ಷ ಸಿದ್ದಿಕ್ ಸುಲ್ತಾನ್ ಮತ್ತಿತರ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!