ಬಂಟ್ವಾಳ: ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ ಮಾಡುತ್ತಿದ್ದ ಇಬ್ಬರ ಬಂಧನ
ಬಂಟ್ವಾಳ: ಗಾಂಜಾ ಸೇವಿಸಿ ಸಾರ್ವಜನಿಕರಿಗೆ ಕಿರಿಕಿರಿ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಸಜೀಪ ಮುನ್ನೂರು ಗ್ರಾಮದ ನಂದಾವರ ಕೋಟೆ ನಿವಾಸಿ ಮಹಮ್ಮದ್ ಶಾಕಿಬ್ (20) ಹಾಗೂ ಬಿ.ಮೂಡ ಗ್ರಾಮದ ಶಾಂತಿ ಅಂಗಡಿ ಮಹಮ್ಮದ್ ಆರೀಫ್ (20) ಬಂಧಿತ ಆರೋಪಿಗಳಾಗಿದ್ದಾರೆ.
ಬಂಟ್ವಾಳ ತಾಲೂಕಿನ ಸಜೀಪ ಮುನ್ನೂರು ಗ್ರಾಮದ ನಂದಾವರ ಶಾಲೆಯ ಬಳಿ ಇಬ್ಬರು ಯುವಕರು ಮಾದಕ ವಸ್ತುವನ್ನು ಸೇವಿಸಿ ನಶೆ ಹೊಂದಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂಬ ಸ್ಥಳೀಯರು ನೀಡಿದ ದೂರಿನಂತೆ ಸ್ಥಳಕ್ಕೆ ಭೇಟಿ ನೀಡಿದ ಬಂಟ್ವಾಳ ನಗರ ಪೋಲೀಸ್ ಠಾಣಾ ಎಸ್ ಐ ರಾಮಕೃಷ್ಣ ನೇತ್ರತ್ವದ ಪೊಲೀಸ್ ತಂಡ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದೆ.





