ಮಗನನ್ನು ಬಾವಿಗೆ ದೂಡಿ ಕೊಲೆ: ತಾಯಿಗೆ ಜೀವಾವಧಿ ಶಿಕ್ಷೆ
ಚಿಕ್ಕೋಡಿ: ಅನೈತಿಕ ಸಂಬಂಧದಿಂದ ಹೆತ್ತ ಮಗನನ್ನು ಬಾವಿಗೆ ದೂಡಿ ಕೊಲೆ ಮಾಡಿದ ಆರೋಪದ ಮೇಲೆ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯ ಸುಧಾ ಸುರೇಶ್ ಕರಿಗಾರಗೆ (31) ಜೀವಾವಧಿ ಶಿಕ್ಷೆ ಮತ್ತು 7 ಸಾವಿರ ದಂಡ ವಿಧಿಸಿ ಚಿಕ್ಕೋಡಿ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಹುಕ್ಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2019ರ ಅಕ್ಟೋಬರ್ 22ರಂದು ನಡೆದ ಪ್ರಕರಣದ ವಿಚಾರಣೆ ನಡೆಸಿದ ಚಿಕ್ಕೋಡಿ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಎಸ್‌ಎಲ್ ಚೌಹಾಣ್ ಅವರು ಶಿಕ್ಷೆಯ ತೀರ್ಪು ನೀಡಿದ್ದಾರೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ವೈಜಿ ತುಂಗಳ ವಾದ ಮಂಡಿಸಿದರು.





