ತಾಲೂಕು ಕಚೇರಿಯ ಮೇಲಿಂದ ಬಿದ್ದು ವ್ಯಕ್ತಿ ಆತ್ಮಹತ್ಯೆ
ಬೆಂಗಳೂರು: ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಅದರಂತೆ ಇದೀಗ ಸ್ವಾತಂತ್ರ್ಯ ದಿನಾಚರಣೆಯಂದೆ ಹೊಸಕೋಟೆ ತಾಲೂೂಕು ಕಛೇರಿ ಮೇಲಿಂದ ಬಿದ್ದು ಬಿಹಾರ ಮೂಲದ ವ್ಯಕ್ತಿಯೊರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪ್ರೇಮ್ ಬಾಸ್ಕಿ, ತಾಲ್ಲೂಕು ಕಛೇರಿ ಮಹಡಿ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇನ್ನು ಇತನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.





