ಉಳ್ಳಾಲ: ಮಗ ಆತ್ಮಹತ್ಯೆ ಮಾಡಿದ ತಿಂಗಳ ಬಳಿಕ ತಂದೆಯೂ ಆತ್ಮಹತ್ಯೆ
ಉಳ್ಳಾಲ: ಮಗ ಆತ್ಮಹತ್ಯೆ ಮಾಡಿದ 32 ದಿನಗಳ ನಂತರ ತಂದೆಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಆತ್ಮಹತ್ಯೆ ಮಾಡಿಕೊಂಡ ಕೇರಳ ಕುಂಬಳೆ ಬಳಿಯ ಬಂಬ್ರಾಣ ಕಲ್ಕುಲ ನಿವಾಸಿ ಕಲ್ಲಿನ ಮೇಸ್ತ್ರಿ ಕೆಲಸ ಮಾಡುತ್ತಿದ್ದ ಲೋಕೇಶ್ (52) ಎಂಬವರ ಮೃತದೇಹ ಸೋಮವಾರ ಬೆಳಿಗ್ಗೆ ಉಳ್ಳಾಲ ಕಡಲ ಕಿನಾರೆಯಲ್ಲಿ ಪತ್ತೆಯಾಗಿದೆ.
ಪುತ್ರ ರಾಜೇಶ್ (26) ಕಳೆದ ಜು. 10 ರಂದು ನಾಪತ್ತೆಯಾಗಿದ್ದು, ಬಳಿಕ ರಾಜೇಶ್ ನ ಮೃತದೇಹ 12 ರಂದು ಬೆಳಗ್ಗೆ ಮಂಗಳೂರು ಬೆಂಗರೆ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿತ್ತು.
ಮಗನ ಅಂತ್ಯಕ್ರಿಯೆ ಕಳೆದ ಬಳಿಕ ತಂದೆ ಲೋಕೇಶ್ ನೊಂದುಕೊಂಡಿದ್ದು, ಅಲ್ಲದೆ ಮಗನ ಸಾವಿನ ಬಳಿಕ ಮಾನಸಿಕವಾಗಿ, ಕುಗ್ಗಿ ಹೋಗಿದ್ದರು.





