ವಿಟ್ಲ: ಬಾರಿ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವಕ: ಸಂಬಂಧಿಯೊಬ್ಬರ ಉತ್ತರ ಕ್ರಿಯೆ ಬಳಿಕ ಆತ್ಮಹತ್ಯೆ ಶರಣಾದ ಬಿಜೆಪಿ ಕಾರ್ಯಕರ್ತ
ವಿಟ್ಲ: ವ್ಯಕ್ತಿಯೋರ್ವ ಬಾವಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಪೆರಾಜೆ ಎಂಬಲ್ಲಿ ನಡೆದಿದೆ.
ಪೆರಾಜೆ ನಿವಾಸಿ ಪ್ರಶಾಂತ್ ನಾಯ್ಕ್ (29) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ರಾತ್ರಿ ಸುಮಾರು 2 ಗಂಟೆಯ ಬಳಿಕ ಈತ ಬಾವಿಗೆ ಹಾರಿರಬೇಕು ಎಂದು ಹೇಳಲಾಗುತ್ತಿದೆ.
ಪ್ರಶಾಂತ್ ಅವರ ದೊಡ್ಡಮ್ಮ ವಾರಗಳ ಹಿಂದೆ ತೀರಿಕೊಂಡಿದ್ದು,ಅವರ ಉತ್ತರಕ್ರಿಯೆ ಕಾರ್ಯಕ್ರಮ ನಿನ್ನೆ ಬುಧವಾರ ಇವರ ಮನೆಯಲ್ಲಿ ನಡೆದಿತ್ತು. ಅ ಬಳಿಕ ರಾತ್ರಿ ಕೂಡ ಅದೇ ವಿಚಾರವಾಗಿ ಕಾರ್ಯಕ್ರಮದ ಊಟ ಮಾಡಿ ಸ್ನೇಹಿತರ ಹಾಗೂ ಸಂಬಂಧಿಕರು ಹೋದ ಬಳಿಕ ಎಲ್ಲರು ಮನೆಯಲ್ಲಿ ಮಲಗಿದ್ದರು.
ಆದೇ ಸಮಯದಲ್ಲಿ ಈತ ಮನೆಯಿಂದ ಹೊರಗೆ ಬಂದು ಮನೆಯ ಸಮೀಪದ ಬಾವಿಗೆ ಹಾರಿರಬೇಕು ಎಂದು ಶಂಕಿಸಲಾಗಿದೆ.
ನೇರಳಕಟ್ಟೆ ಅಗ್ರಿ ಎಂಬ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಈತ ಕಳೆದ ಒಂದು ವರ್ಷಗಳ ಹಿಂದೆ ಮದುವೆಯಾಗಿದ್ದ. ಸದಾ ನಗುಮೊಗದ ಪ್ರಶಾಂತ್ ಎಲ್ಲರೊಂದಿಗೆ ಸ್ನೇಹ ಜೀವಿಯಾಗಿದ್ದುಕೊಂಡಿದ್ದ ಜೊತೆಗೆ ಸಾಮಾಜಿಕವಾಗಿಯೂ ಗುರುತಿಸಿಕೊಂಡಿದ್ದ. ಬಿಜೆಪಿಯ ಸಕ್ರೀಯ ಕಾರ್ಯಕರ್ತನಾಗಿದ್ದು, ಪೆರಾಜೆ ಯುವ ವೇದಿಕೆಯ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದ ಇದೀಗ ಸದಸ್ಯನಾಗಿ ಸೇವೆ ಮಾಡುತ್ತಿದ್ದ.
ಸ್ಥಳಕ್ಕೆ ವಿಟ್ಲ ಪೋಲೀಸರು ಆಗಮಿಸಿದ್ದು, ಕೌಟುಂಬಿಕ ಕಲಹ ಆತ್ಮಹತ್ಯೆಗೆ ಕಾರಣವಾಗಿರಬೇಕು ಎಂದು ಶಂಕಿಸಲಾಗಿದೆ.
ಬಂಟ್ವಾಳ ಅಗ್ನಿ ಶಾಮಕ ದಳ ಹಾಗೂ ಗೂಡಿನ ಬಳಿಯ ಮುಳುಗುತಜ್ಞರು ಆಗಮಿಸಿ ಮೃತದೇಹವನ್ನು ಬಾವಿಯಿಂದ ಮೇಲಕ್ಕೆತ್ತಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.






