ದಾವಣಗೆರೆ, ಚಿತ್ರದುರ್ಗ ಜಿಲ್ಲೆ ಸೇರಿದಂತೆ ವಿವಿಧೆಡೆ ಅಧಿಕಾರಿಗಳ ಮನೆ ಮೇಲೆ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ದಾಳಿ
ಚಿತ್ರದುರ್ಗ: ದಾವಣಗೆರೆ, ಚಿತ್ರದುರ್ಗ ಜಿಲ್ಲೆ ಸೇರಿದಂತೆ ವಿವಿಧೆಡೆ ಅಧಿಕಾರಿಗಳ ಮನೆ ಮೇಲೆ ಗುರುವಾರ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆದಾಯಕ್ಕಿಂತಲೂ ಹೆಚ್ಚಿನ ಆಸ್ತಿ ಸಂಪಾದನೆ ಮಾಡಿರುವ ದೂರು ಬಂದ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಸಣ್ಣ ನೀರಾವರಿ ಇಲಾಖೆ ಎಂಜಿನಿಯರ್ ಕೆ. ಮಹೇಶ್ ಮತ್ತು ಅವರ ಪತ್ನಿ ಬಿಬಿಎಂಪಿ ಎಇ ಭಾರತಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.





