ಶಾಲೆಗೆ ತೆರಳುತ್ತಿದ್ದ ವೇಳೆ ಹರಿದ ಬಸ್: ನಾಲ್ಕೂವರೆ ವರ್ಷದ ಬಾಲಕಿ ಸಾವು
ಬೆಂಗಳೂರು: ಶಾಲೆಗೆ ತೆರಳುತ್ತಿದ್ದ ವೇಳೆ ಬಿಎಂಟಿಸಿ ಬಸ್ ಹರಿದು ನಾಲ್ಕೂವರೆ ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಉತ್ತರಹಳ್ಳಿ ಮುಖ್ಯರಸ್ತೆಯ ಬಳಿ ನಡೆದಿದೆ.
ಪದ್ಮಾವತಿ ಸಿಲ್ಕ್ ಶೋ ರೂಂ ಬಳಿ ಘಟನೆ ನಡೆದಿದ್ದು, ನಾಲ್ಕೂವರೆ ವರ್ಷದ ಪೂರ್ವಿ ರಾವ್ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ತಂದೆ ಪ್ರಸನ್ನ ಮಗಳು ಪೂರ್ವಿಯನ್ನು ಶಾಲೆಗೆ ಬಿಡಲು ಬೈಕ್‌ನಲ್ಲಿ ಕರೆದೊಯ್ಯುತ್ತಿದ್ದರು.
ಈ ವೇಳೆ ವೇಗವಾಗಿ ಬಂದ ಬಸ್ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ತಂದೆ ಪ್ರಸನ್ನ ಬೈಕ್‌ನ ಎಡಬದಿಗೆ ಬಿದ್ದಿದ್ದಾರೆ.
ಪೂರ್ವಿ ಬಲಬದಿಗೆ ಬಿದ್ದಿದ್ದು, ಈ ವೇಳೆ ಆಕೆಯ ಮೇಲೆ ಬಿಎಂಟಿಸಿ ಬಸ್ ಹರಿದು ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ.





