ರಸ್ತೆ ಅಪಘಾತಕ್ಕೆ ವಿದ್ಯಾರ್ಥಿನಿ ಸಾವು: ನೇತ್ರಾದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು
ಚಿಕ್ಕಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಬಳಿ ಕಳೆದ ಗುರುವಾರ ಸಂಭವಿಸಿದ್ದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಕುಟುಂಬಸ್ಥರು ಸಾವಿನ ನೋವಿನಲ್ಲೂ ಆಕೆಯ ಕಣ್ಣುಗಳನ್ನು ದಾನ ಮಾಡುವ ಮೂಲಕ ಮಾನವೀಯತೆ, ಸಾರ್ಥಕತೆ ಭಾವ ಮೆರೆದಿದ್ದಾರೆ.
ಆಗಸ್ಟ್ 10ರಂದು ಮಗಳನ್ನು ಶಾಲೆಗೆ ಬಿಡಲು ಬೈಕ್‌ನಲ್ಲಿ ಹೊರಟಿದ್ದ ಮುದ್ದನಾಯಕನಹಳ್ಳಿ ನಿವಾಸಿ ವೆಂಕಟೇಶ್ (42) ಸ್ಥಳದಲ್ಲೇ ಮೃತಪಟ್ಟಿದ್ದರು.
ಗಂಭೀರವಾಗಿ ಗಾಯಗೊಂಡಿದ್ದ ಮಗಳು ಯಶಸ್ವಿನಿಗೆ (16) ಬೆಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಕಳೆದ 6 ದಿನಗಳಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯಶಸ್ವಿನಿ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಕೊನೆಯುಸಿರೆಳಿದ್ದಾಳೆ





