ಜನಪ್ರಿಯ ಆಸ್ಪತ್ರೆಗೆ ಅತ್ಯುತ್ತಮ ಸೇವಾ ಪ್ರಶಸ್ತಿ
ಮಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹಾಸನ ಜಿಲ್ಲಾಡಳಿತದ ವತಿಯಿಂದ ನಡೆಯುವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಮತ್ತು ಆರೋಗ್ಯ ಕರ್ನಾಟಕದ ಅಡಿಯಲ್ಲಿ ಆಸ್ಪತ್ರೆಯ ಅನುಕರಣಿಯ ಕಾರ್ಯಕ್ಷಮತೆಗಾಗಿ ಮತ್ತು ಸರ್ಕಾರದ ಯೋಜನೆಗಳನ್ನು ಯಶಸ್ವಿಯಾಗಿ ಜನರಿಗೆ ತಲುಪಿಸಿರುವ ಆಸ್ಪತ್ರೆಗೆ ಜಿಲ್ಲಾಡಳಿತದ ವತಿಯಿಂದ 2022-23ನೇ ಸಾಲಿನ ಅತ್ಯುತ್ತಮ ಆಸ್ಪತ್ರೆ ಎಂದು ಜನಪ್ರಿಯ ಆಸ್ಪತ್ರೆಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಈ ಪ್ರಶಸ್ತಿಯನ್ನು ಕರ್ನಾಟಕ ರಾಜ್ಯ ಸರ್ಕಾರದ ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ಎನ್ ರಾಜಣ್ಣನವರು ಜನಪ್ರಿಯ ಫೌಂಡೇಶನ್‍ನ ಉಪಾಧ್ಯಕ್ಷರಾದ ಫಾತಿಮಾ ನಸ್ರೀನ್ ಬಶೀರ್‍ರವರು ಆಸ್ಪತ್ರೆಯ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು.
ಇದೇ ಸಂದರ್ಭದಲ್ಲಿ ಹಾಸನ ಶಾಸಕರಾದ ಸ್ವರೂಪ್ ಪ್ರಕಾಶ್, ಜಿಲ್ಲಾಧಿಕಾರಿಯಾದ ಸಿ. ಸತ್ಯಭಾಮ, ಸಿ.ಇ.ಓ. ಬಿ.ಆರ್. ಪೂರ್ಣಿಮಾ, ಜಿಲ್ಲಾ ಎಸ್.ಪಿ. ಹರಿರಾಮ್ ಶಂಕರ್ ಮತ್ತು ಇತರೆ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ನೀಡಲಾಯಿತು.





