March 22, 2026

ರಾಜ್ಯ ರಾಜಕೀಯದಲ್ಲಿ ಮತ್ತೆ ಆಪರೇಷನ್ ಬಿರುಗಾಳಿ: ಕಾಂಗ್ರೆಸ್ ನತ್ತ ಮುಖ ಮಾಡಿದ ಎಸ್ ಟಿ ಸೋಮಶೇಖರ್?

0
IMG-20230817-WA0017.jpg

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೆ ಆಪರೇಷನ್ ಬಿರುಗಾಳಿ ಎದ್ದಿದ್ದು, ಯಶವಂತಪುರ ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್​​ ಅವರು ಕಾಂಗ್ರೆಸ್​ನ ಗಾಳಕ್ಕೆ ಬಿದ್ದಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.

ಬೆಂಗಳೂರಿನ ಹೇರೋಹಳ್ಳಿಯಲ್ಲಿರುವ ಎಸ್. ಟಿ. ಸೋಮಶೇಖರ್ ಕಚೇರಿಗೆ ಭೇಟಿ ನೆಲಮಂಗಲ ಶಾಸಕ ಎನ್. ಶ್ರೀನಿವಾಸ್ ಭೇಟಿ ನೀಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ.

ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ‌ ಮತ್ತು ಮಾಜಿ ಸಚಿವ ಸಿಟಿ ರವಿ ಎಸ್​ಟಿ ಸೋಮಶೇಖರ್​ಗೆ ದೂರವಾಣಿ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್​ ಕಾಂಗ್ರೆಸ್​ ಸೇರ್ಪಡೆಯಾಗಲು ಸಜ್ಜಾದಂತಿದ್ದು, ಸೋಮೇಶಖರ್​ ತಮ್ಮ ಬೆಂಬಲಿಗರ ಜೊತೆ ಸಭೆ ನಡೆಸಿದ್ದು, ಈ ಸಭೆಯಲ್ಲಿ ನೆಲಮಂಗಲ ಕಾಂಗ್ರೆಸ್ ಶಾಸಕ ಎನ್. ಶ್ರೀನಿವಾಸ್ ಪಾಲ್ಗೊಂಡಿರುವುದು ಅಚ್ಚರಿ ಮೂಡಿಸಿದೆ.

Leave a Reply

Your email address will not be published. Required fields are marked *

error: Content is protected !!