February 3, 2026

ವಿಟ್ಲ: ಮಾಣಿಲ ಗ್ರಾಮ ಪಂಚಾಯತ್ ನ ಎರಡನೇ ಅವಧಿಯ ಅಧ್ಯಕ್ಷರಾಗಿ ಕಾಂಗ್ರೆಸ್ ನ ಶ್ರೀಧರ್ ಬಾಳೆಕಲ್ಲು, ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯೆ ಗೀತಾ ಆಯ್ಕೆ

0
image_editor_output_image650622854-1692288751828.jpg

ವಿಟ್ಲ: ಮಾಣಿಲ ಗ್ರಾಮ ಪಂಚಾಯತ್ ನ ಎರಡನೇ ಅವಧಿಯ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಆ.೧೮ರಂದು ನಡೆಯಿತು. ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಶ್ರೀಧರ ಬಾಳೆಕಲ್ಲು ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯೆ ಗೀತಾ ರವರು ಆಯ್ಕೆಯಾಗಿದ್ದಾರೆ.
ಮಾಣಿಲ ಗ್ರಾಮ ಪಂಚಾಯತ್ ನಲ್ಲಿ 8 ಮಂದಿ ಸದಸ್ಯರಿದ್ದು ಅದರಲ್ಲಿ 4 ಮಂದಿ ಕಾಂಗ್ರೆಸ್, 1 ಪಕ್ಷೇತರ ಸದಸ್ಯರು ಹಾಗೂ 3 ಬಿಜೆಪಿ ಬಂಬಲಿತ ಸದಸ್ಯರಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಶ್ರೀಧರ ಬಾಳೆಕಲ್ಲು ಹಾಗೂ ಬಿಜೆಪಿ ಬೆಂಬಲಿತ ಸದಸ್ಯರಾಗಿರುವ ಚಂದ್ರಶೇಖರರವರು ನಾಮಪತ್ರ ಸಲ್ಲಿಸಿದ್ದರು. ಬಳಿಕ ನಡೆದ ಮತದಾನದಲ್ಲಿ ಶ್ರೀಧರ ಬಾಳೆಕಲ್ಲುರವರಿಗೆ 5 ಮತ ಲಭಿಸುವುದರೊಂದಿಗೆ ಅವರು ವಿಜಯಿಯಾಗಿದ್ದರು.
ಉಪಾಧ್ಯಕ್ಷ ಸ್ಥಾನವು ಎಸ್.ಸಿ.ಮಹಿಳೆಗೆ ಮೀಸಾಲಾಗಿರುವುದರಿಂದ ಕಾಂಗ್ರೆಸ್ ಪಕ್ಷದಲ್ಲಿ ಎಸ್.ಸಿ.ಮಹಿಳೆ ಸದಸ್ಯರಿಲ್ಲದ ಹಿನ್ನೆಲೆಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯೆ ಗೀತರವರು ಅವಿರೋಧವಾಗಿ ಆಯ್ಕೆಯಾಗಿದ್ದರು.

Leave a Reply

Your email address will not be published. Required fields are marked *

error: Content is protected !!