ಟಾಟಾ ಏಸ್ ವಾಹನದಲ್ಲಿ ಬಂದು 1,500 ಎಳನೀರನ್ನು ಕಳವು: ಮೂವರು ಆರೋಪಿಗಳ ಬಂಧನ
ಬೆಂಗಳೂರು: ರಾತ್ರೋರಾತ್ರಿ ಟಾಟಾ ಏಸ್ ವಾಹನದಲ್ಲಿ ಬಂದ ಖದೀಮರು ರಸ್ತೆ ಬದಿಯಲ್ಲಿ ಇಟ್ಟಿದ್ದ ಬರೋಬ್ಬರಿ 1,500 ಎಳನೀರನ್ನು ಕದ್ದುಕೊಂಡು ಹೋಗಿರುವ ಘಟನೆ ಜಯನಗರ ರಾಷ್ಟ್ರೀಯ ವಿದ್ಯಾಲಯ ಮೆಟ್ರೋ ನಿಲ್ದಾಣದ ಬಳಿ ನಡೆದಿದೆ.
ಆಗಸ್ಟ್ 7ರಂದು ಮುಂಜಾನೆ ಕಳ್ಳತನ ನಡೆದಿದೆ. ಕ್ಯಾಂಟರ್‌ನಲ್ಲಿ ಬಂದ ಕಳ್ಳರು ಸುಮಾರು 1,500 ಎಳನೀರನ್ನು ಕಳ್ಳತನ ಮಾಡಿದ್ದಾರೆ.
ನಂಬರ್ ಪ್ಲೇಟ್‌ಗೆ ಮಸಿ ಬಳಿದು ಖದೀಮರು ಕೃತ್ಯ ಎಸಗಿದ್ದಾರೆ. ಈ ಬಗ್ಗೆ ಜಯನಗರ ಪೊಲೀಸ್ ಠಾಣೆಯಲ್ಲಿ ಮಾಲೀಕ ಸಲೀಂ ದೂರು ದಾಖಲಿಸಿದ್ದಾರೆ.





