ಟ್ಯೂಶನ್ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಗೂಡ್ಸ್ ವಾಹನ ಢಿಕ್ಕಿ: ಬಾಲಕ ಮೃತ್ಯು
ರಾಮನಗರ: ಟ್ಯೂಶನ್ ಮುಗಿಸಿ ಮನೆಗೆ ಹೋಗುತ್ತಿದ್ದ ಮಕ್ಕಳಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಗೊಂಡಿದ್ದ ಮತ್ತೊಂದು ಬಾಲಕ ಸಾವನ್ನಪ್ಪಿದ ಘಟನೆ ರಾಮನಗರದಲ್ಲಿ ನಡೆದಿದೆ.
ಸುಚಿತ್ (10) ಮೃತ ದುರ್ದೈವಿ. ರಾಮನಗರ ತಾಲೂಕಿನ ಗೊಲ್ಲರದೊಡ್ಡಿ ಗ್ರಾಮದಲ್ಲಿ ಅಪಘಾತ ನಡೆದಿದ್ದು, ಸಾವಿನ ಸಂಖ್ಯೆ ಒಟ್ಟು ಮೂರಕ್ಕೆ ಏರಿದೆ.
ಆಗಸ್ಟ್ 9ರಂದು ಟ್ಯೂಶನ್ ಮುಗಿಸಿಕೊಂಡು ಐವರು ಮಕ್ಕಳು ಮನೆಗೆ ಹೋಗುತ್ತಿದ್ದ ಸಂದರ್ಭ ಗೂಡ್ಸ್ ವಾಹನ ಡಿಕ್ಕಿಯಾಗಿದ್ದು, ಇಬ್ಬರು ಸಾವನ್ನಪ್ಪಿದ್ದರು





