ವಿಟ್ಲ, ಕೋಟೆಕಾರ್ ಪಟ್ಟಣ ಪಂಚಾಯತ್ ಗೆ ಚುನಾವಣೆ ದಿನಾಂಕ ಘೋಷಣೆ
ಮಂಗಳೂರು: ಪಟ್ಟಣ, ನಗರ ಪಂಚಾಯತ್, ಸ್ಥಳೀಯ ಪಂಚಾಯತ್ ಜನಪ್ರತಿನಿಧಿಗಳ ಅವಧಿ ಮುಗಿದ ಹಿನ್ನೆಲೆಯಲ್ಲಿ
58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ದಿನಾಂಕವನ್ನು ರಾಜ್ಯ ಚುನಾವಣೆ ಆಯೋಗ ಪ್ರಕಟಿಸಿದೆ.
ದ.ಕ. ಜಿಲ್ಲೆಯ ವಿಟ್ಲ ಹಾಗೂ ಕೋಟೆಕಾರ್ ಪಟ್ಟಣ ಪಂಚಾಯತ್, ಉಡುಪಿ ಜಿಲ್ಲೆಯ ಕಾಪು ಪುರಸಭೆ ಸೇರಿದಂತೆ ಅವಧಿ ಮುಗಿದ 34 ಪಟ್ಟಣ ಪಂಚಾಯತ್, 19 ಪುರಸಭೆ ಹಾಗೂ 5 ನಗರಸಭೆಗಳಿಗೆ ಡಿಸೆಂಬರ್ 27ರಂದು ಚುನಾವಣೆ ನಡೆಯಲಿದೆ.
ಈ ಬಗ್ಗೆ ಡಿ.8ರಂದು ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಲಿದ್ದಾರೆ.
ಡಿ.15 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಡಿ.16ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ಡಿ.18 ಕೊನೆಯ ದಿನವಾಗಿರುತ್ತದೆ. ಡಿ.27ರಂದು ಬೆಳಿಗ್ಗೆ 7ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ಅಗತ್ಯ ಬಿದ್ದಲ್ಲಿ ಡಿ.29ರಂದು ಮರು ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಡಿ.30ರಂದು ಬೆಳಗ್ಗೆ 8ರಿಂದ ಆಯಾ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದೆ ಎಂದು ಚುನಾವಣೆ ಆಯೋಗ ಪ್ರಕಟನೆಯಲ್ಲಿ ತಿಳಿಸಿದೆ.





