ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ದಂಧೆ: ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ
ಮಂಗಳೂರು: ದಿನಸಿ ಅಂಗಡಿಯ ಮುಂದಿನ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ದಂಧೆ ನಡೆಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ನಗರದ ಚಿಲಿಂಬಿಯ ಗೋಕುಲದಾಸ ಶೆಣೈ ಮತ್ತು ಕೋಡಿಕಲ್ ನಿವಾಸಿ ದೀಪಕ್ ಶೆಟ್ಟಿ ಎಂದು ಗುರುತಿಸಲಾಗಿದೆ.
ಮಟ್ಕಾ ದಂಧೆಗೆ ಬಳಸಿದ್ದ 4,24,490 ರೂ. ನಗದು, ಮೊಬೈಲ್ ಫೋನ್ ಹಾಗೂ ಮಟ್ಕಾ ಬರೆದಿದ್ದ ಚೀಟಿಗಳನ್ನು ವಶಪಡಿಸಿಕೊಂಡಿದ್ದಾರೆ.





