March 19, 2026

ಕಾಸರಗೋಡು: ಕ್ವಾರ್ಟರ್ಸ್‌ನ ಮೇಲಿನಿಂದ ಬಿದ್ದು ಕಾರ್ಮಿಕ ಮೃತ್ಯು
 

0
image_editor_output_image915891367-1692459488788.jpg


ಕಾಸರಗೋಡು : ಕ್ವಾರ್ಟರ್ಸ್‌ನ ಮೇಲಿನಿಂದ ಬಿದ್ದು ವಲಸೆ ಕಾರ್ಮಿಕನೋರ್ವ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಸೀತಾಂಗೋಳಿಯಲ್ಲಿ ನಡೆದಿದೆ.

ರಾಜಸ್ತಾನ ಬೋಡಗಾನ್ ನಿವಾಸಿ ಕೇಮ್ರಾಜ್ ಗುಜ್ಜರ್ (43) ಮೃತಪಟ್ಟವರು.

ಕಳೆದ 20 ವರ್ಷಗಳಿಂದ ಸೀತಾಂಗೋಳಿಯಲ್ಲಿ ಗ್ರಾನೈಟ್ ಮಾರ್ಬಲ್ ಕೆಲಸ ನಿರ್ವಹಿಸುತ್ತಿದ್ದ ಇವರು ಸೀತಾಂಗೋಳಿ ಪೇಟೆಯಲ್ಲಿ ರುವ ಕ್ವಾರ್ಟರ್ಸ್‌ನಲ್ಲಿ ವಾಸಿಸುತ್ತಿದ್ದರು. ಶುಕ್ರವಾರ ರಾತ್ರಿ ಇವರು ಕ್ವಾರ್ಟರ್ಸ್‌ನ ಮೇಲಿನ ಮಹಡಿಯಲ್ಲಿ ನಿದ್ರಿಸುತ್ತಿದ್ದರು. ಶನಿವಾರ ಮುಂಜಾನೆ ಜತೆಗಿದ್ದವರು ಎದ್ದು ನೋಡಿದಾಗ ಕೇಮ್ರಾಜ್ ಗುಜ್ಜರ್ ಕ್ವಾರ್ಟರ್ಸ್‌ನ ಕೆಳಗೆ ಬಿದ್ದಿರುವುದು ಪತ್ತೆಯಾಗಿದೆ.

ಕೇಮ್ರಾಜ್‌ನ ಸಹೋದರ ಎಮ್ರಾಜ್ ಕೂಡಾ ಸೀತಾಂಗೋಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದು ಇವರು ಜತೆಯಾಗಿ ವಾಸಿಸುತ್ತಿದ್ದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಾಸರಗೋಡು ಜನರಲ್ ಆಸ್ಪತ್ರೆಗೆ ತಲುಪಿಸಲಾಗಿದೆ”

Leave a Reply

Your email address will not be published. Required fields are marked *

error: Content is protected !!