ಓಮಿಕ್ರಾನ್ ಆತಂಕ:
ಶಾಲಾ -ಕಾಲೇಜು ಸ್ಥಗಿತಗೊಳಿಸುವ ನಿರ್ಧಾರ ಕೈಗೊಂಡಿಲ್ಲ: ಸಚಿವ ಬಿ.ಸಿ.ನಾಗೇಶ್
ಬೆಂಗಳೂರು: ಕೊವೀಡ್ -19 ಹೊಸ ರೂಪಾಂತರ ತಳಿ ಓಮಿಕ್ರಾನ್ ಕಾರಣದಿಂದ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳನ್ನ ಶಾಲೆಗೆ ಕಳುಹಿಸಲು ಪೋಷಕರು ಹಿಂದೇಟು ಹಾಕುತ್ತಿರುವ ವಿಚಾರವಾಗಿ ಮಾತನಾಡಿದ ಶಿಕ್ಷಣ ಸಚಿವ ಬಿ. ಸಿ ನಾಗೇಶ್ ರಾಜ್ಯದಲ್ಲಿ ಶಾಲಾ -ಕಾಲೇಜು ಭೌತಿಕ ತರಗತಿಗಳನ್ನು ಸ್ಥಗಿತಗೊಳಿಸುವ ನಿರ್ಧಾರ ಕೈಗೊಂಡಿಲ್ಲ. ಅದರೂ ಪೋಷಕರು ಈ ಬಗ್ಗೆ ಆತಂಕ ಪಡಬೇಕಿಲ್ಲ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ” ಶಾಲಾ ಕಾಲೇಜು ಮುಚ್ಚುವ ನಿರ್ಧಾರ ಸದ್ಯ ಶಿಕ್ಷಣ ಇಲಾಖೆಯ ಮುಂದಿಲ್ಲ. ಕೊರೊನಾ ಹಿನ್ನಲೆಯಲ್ಲಿ ಶಿಕ್ಷಣ ಇಲಾಖೆಯೂ ಆರೋಗ್ಯ ಇಲಾಖೆಯೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದೆ ಕೊರೊನಾ ಹೆಚ್ಚಾದರೆ ಸರ್ಕಾರದ ಸಲಹೆ ಪಡೆದು ನಿರ್ಧಾರ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.





