February 4, 2026

ಬ್ರಹ್ಮಾವರ:ಗೆಳತಿಯ ಸಾವಿನಿಂದ ಮಾನಸಿಕವಾಗಿ ನೊಂದಿದ್ದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು
 

0
IMG-20230821-WA0078


ಬ್ರಹ್ಮಾವರ: ಗೆಳತಿಯ ಸಾವಿನಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ಸಮೀಪದ ನೀಲಾವರ ಬಾವಲಿಕುದ್ರುವಿನಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಬಾವಲಿಕುದ್ರು ನಿವಾಸಿ ಪುತ್ರ ಸುಜಿತ್ ಡೇವಿಡ್ ಡಿಸೋಜಾ (21) ಎಂದು ಗುರುತಿಸಲಾಗಿದೆ.

ಸುಜಿತ್ ಖಾಸಗಿ ಕಾಲೇಜಿನಲ್ಲಿ 2 ನೇ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿದ್ದು, ಅವನು ಪ್ರೀತಿಸುತ್ತಿದ್ದ ಹುಡುಗಿ ಕೆಲ ದಿನಗಳ ಹಿಂದೆ ಮೃತಪಟ್ಟಿದ್ದಳು. ಇದೇ ವಿಚಾರವಾಗಿ ಸುಜಿತ್ ಡೇವಿಡ್ ಡಿಸೋಜನು ಮಾನಸಿಕವಾಗಿ ಕುಗ್ಗಿದ್ದು ಭಾನುವಾರ ಮನೆಯಲ್ಲಿ ನೇಣು ಹಾಕಿಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!