ಸುರತ್ಕಲ್: ಫಾಝೀಲ್ ಹತ್ಯೆ ಪ್ರಕರಣ: ಇಬ್ಬರು ಹಂತಕರಿಗೆ ಜಾಮೀನು ಮಂಜೂರು
ಸುರತ್ಕಲ್: ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದರೆನ್ನಲಾದ ಇಬ್ಬರು ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ ಎಂದು ತಿಳಿದು ಬಂದಿದೆ.
ಪ್ರಕರಣದಲ್ಲಿ ಭಾಗಿಯಾಗಿದ್ದರೆನ್ನಲಾದ ಐದನೇ ಆರೋಪಿಯಾಗಿ ಗುರುತಿಸಲಾಗಿದ್ದ ಶ್ರೀನಿವಾಸ್ ಮತ್ತು ಆರೋಪಿಗಳು ಪರಾರಿಯಾಗಲು ಕಾರು ನೀಡಿದ್ದ ಆರೋಪ ಎದುರಿಸುತ್ತಿದ್ದ ಅಜಿತ್ ಕ್ರಾಸ್ತಾ ಎಂಬರಿಗೆ ಹೈಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ ಎಂದು ತಿಳಿದು ಬಂದಿದೆ.
2202ರ ಜುಲೈ 28ರಂದು ರಾತ್ರಿ ಸುರತ್ಕಲ್ ಮಾರುಕಟ್ಟೆಯಲ್ಲಿ ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ಅವರನ್ನು ಕಾರಿನಲ್ಲಿ ಹೊಂಚು ಹಾಕಿ ಬಂದಿದ್ದ ದುಷ್ಕರ್ಮಿಗಳ ತಂಡ ತಲವಾರುಗಳಿಂದ ಮಾರಣಾಂತಿಕ ಹಲ್ಲೆ ನಡೆಸಿ ಫಾಝಿಲ್ ಅವರನ್ನು ಕೊಲೆ ಮಾಡಿತ್ತು. ಪ್ರಕರಣಕ್ಕೆ ಸಂಬಂಧಿಸಿ ಅಂದಿನ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು 7ಮಂದಿ ಆರೋಪಿಗಳನ್ನು ಬಂಧಿಸಿದ್ದರು.





